ಮತದಾನ ಜಾಗೃತಿ ಮೂಡಿಸಿದ ಪುರಸಭೆ ಸಿಬ್ಬಂದಿ

| Published : Apr 04 2024, 01:06 AM IST

ಮತದಾನ ಜಾಗೃತಿ ಮೂಡಿಸಿದ ಪುರಸಭೆ ಸಿಬ್ಬಂದಿ
Share this Article
  • FB
  • TW
  • Linkdin
  • Email

ಸಾರಾಂಶ

ನನ್ನ ಮತ ನನ್ನ ಹಕ್ಕು, ನನ್ನ ಮತ ಮಾರಾಟಕ್ಕಿಲ್ಲ. ಮೇ ೭ರಂದು ಕಡ್ಡಾಯವಾಗಿ ಮತದಾನ ಮಾಡಿ, ಮತದಾನ ಮಾಡಿ ಸ್ಥಿರ ಸರ್ಕಾರ ರಚನೆಗೆ ಸಹಕರಿಸಿ.

ಕುರುಗೋಡು:

ಇಲ್ಲಿನ ಪುರಸಭೆ ಸಿಬ್ಬಂದಿ ಬುಧವಾರ ಪಟ್ಟಣದಲ್ಲಿ ಮತದಾನ ಜಾಗೃತಿ ಜಾಥಾ ನಡೆಸಿದರು.

ಪಟ್ಟಣದ ಪುರಸಭೆ ಕಚೇರಿಯಿಂದ ಪ್ರಾರಂಭಗೊಂಡ ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತ್ತು ಆಯ್ದ ವಾರ್ಡ್‌ಗಳಲ್ಲಿ ಸಂಚರಿಸಿತು.

ನನ್ನ ಮತ ನನ್ನ ಹಕ್ಕು, ನನ್ನ ಮತ ಮಾರಾಟಕ್ಕಿಲ್ಲ. ಮೇ ೭ರಂದು ಕಡ್ಡಾಯವಾಗಿ ಮತದಾನ ಮಾಡಿ, ಮತದಾನ ಮಾಡಿ ಸ್ಥಿರ ಸರ್ಕಾರ ರಚನೆಗೆ ಸಹಕರಿಸಿ. ಸಂವಿಧಾನ ಮನಗೆ ನೀಡಿದ ಮತದಾನದ ಹಕ್ಕು ಕಡ್ಡಾಯವಾಗಿ ಚಲಾಯಿಸಿ ಎನ್ನುವ ಘೋಷಣೆಗಳನ್ನು ಕೂಗಿ ಜನರಲ್ಲಿ ಜಾಗೃತಿ ಮೂಡಿಸಿದರು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ಪ್ರಜಾಪ್ರಭುತ್ವ ವ್ಯವಸ್ತೆಯಲ್ಲಿ ಚುನಾವಣೆ ಎನ್ನುವುದು ಒಂದು ಹಬ್ಬ ಇದ್ದಂತೆ. ಅದರಲ್ಲಿ ಎಲ್ಲರೂ ಸಕ್ರೀಯವಾಗಿ ಭಾಗವಹಿಸಿ ಸಂಭ್ರಮಿಸಬೇಕು ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಟ್ಟಣದಲ್ಲಿ ಕಡಿಮೆ ಮತದಾನವಾದ ಮತಗಟ್ಟೆಯನ್ನು ಗುರುತಿಸಿ ಅಲ್ಲನ ಮತದಾರರಿಗೆ ಜಾಗೃತಿ ಮೂಡಿಸಬೇಕು. ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಎಲ್ಲರೂ ಕಡ್ಡಾಯವಾಗಿ ಮದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಸ್ಪರ್ಧಿಗಳು ತೋರಿಸುವ ಆಸೆ ಆಮಿಷಗಳಿಗೆ ಬಲಿಯಾಗದೆ ನಿರ್ಭಯವಾಗಿ ಅರ್ಹ ಅಭ್ಯರ್ಥಿಗೆ ಮತದಾನ ಮಾಡಬೇಕು ಎಂದು ಸಲಹೆ ನೀಡಿದರು.

ಎಇ ವಿನಯ್ ದೀಪ್ , ಪರಿಸರ ಅಭಿಯಂತರ ಹನುಮಂತಪ್ಪ, ಸಾಮಾಜಿಕ ಸಂಘಟಕ ಬಸವರಾಜ, ಕಂದಾಯ ಅಧಿಕಾರಿ ಮಲ್ಲಿಕಾರ್ಜುನ, ಎಸ್. ರೇಷ್ಮಾ, ಶಾಸ್ತ್ರೀ, ಹಿರಿಯ ಆರೋಗ್ಯ ನಿರೀಕ್ಷಕ ಸಾಳೇರು ಯುವರಾಜ, ಕಿರಿಯ ಆರೋಗ್ಯ ನಿರೀಕ್ಷಕಿ ಶಾರದಾ, ಹುಲಿಗೆಮ್ಮ, ಬಸಮ್ಮ ಮತ್ತು ಸ್ವಚ್ಛತಾ ಸಿಬ್ಬಂದಿ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.