ನಾಳೆ ಪೊಲೀಸರಿಂದ ಕುರುಕ್ಷೇತ್ರ ನಾಟಕ ಪ್ರದರ್ಶನ

| Published : Jan 13 2025, 12:45 AM IST

ಸಾರಾಂಶ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಮೀಪ ಜ. ೧೪ರ ಮಂಗಳವಾರ ರಾತ್ರಿ ನಿರ್ಮಿಸುವ ವಿಶೇಷ ವೇದಿಕೆಯಲ್ಲಿ ಮಲ್ಲತಮ್ಮನಹಳ್ಳಿಯ ಎಂ.ಪಿ.ಪದ್ಮರಾಜು ನಿರ್ದೇಶನದಲ್ಲಿ ತಾಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಅಭಿನಯಿಸುವ ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಪುರಾಣದ ಪಾತ್ರಗಳ ಮೂಲಕ ಬದುಕಿನ ಆದರ್ಶಗಳನ್ನು ಮಕ್ಕಳ ಮನಸ್ಸಿಗೆ ತುಂಬಿಸುತ್ತಾ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬೇರುಗಳನ್ನು ಮಕ್ಕಳಿಗೆ ತಿಳಿಸಿಕೊಡುತ್ತಾ ಅವರಿಗೆ ಬದುಕಿನ ಸನ್ಮಾರ್ಗವನ್ನು ತೋರಿಸುವ ಜತೆಗೆ ಗಟ್ಟಿಗೊಳಿಸಬೇಕಿದೆ.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಮೀಪ ಜ. ೧೪ರ ಮಂಗಳವಾರ ರಾತ್ರಿ ನಿರ್ಮಿಸುವ ವಿಶೇಷ ವೇದಿಕೆಯಲ್ಲಿ ಮಲ್ಲತಮ್ಮನಹಳ್ಳಿಯ ಎಂ.ಪಿ.ಪದ್ಮರಾಜು ನಿರ್ದೇಶನದಲ್ಲಿ ತಾಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಅಭಿನಯಿಸುವ ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಪೌರಾಣಿಕ ನಾಟಕಗಳು ಜೀವನದ ಪ್ರತಿಬಿಂಬವಾಗಿದ್ದು, ಪೂರ್ವಜರ ಕಾಲದಿಂದಲೂ ಬೆಳೆದುಕೊಂಡು ಬಂದಿರುವ ನಾಟಕ ಕಲೆಯನ್ನು ಮುಂದಿನ ತಲೆಮಾರಿಗೂ ಉಳಿಸಿ, ಬೆಳೆಸುವ ಕೆಲಸ ಮಾಡುವ ಜತೆಗೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಹಬಾಳ್ವೆಯಿಂದ ಬದುಕು ಸಾಗಿಸುವ ಸಂದೇಶ ಸಾರುತ್ತಿದೆ. ಪುರಾಣದ ಪಾತ್ರಗಳ ಮೂಲಕ ಬದುಕಿನ ಆದರ್ಶಗಳನ್ನು ಮಕ್ಕಳ ಮನಸ್ಸಿಗೆ ತುಂಬಿಸುತ್ತಾ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬೇರುಗಳನ್ನು ಮಕ್ಕಳಿಗೆ ತಿಳಿಸಿಕೊಡುತ್ತಾ ಅವರಿಗೆ ಬದುಕಿನ ಸನ್ಮಾರ್ಗವನ್ನು ತೋರಿಸುವ ಜತೆಗೆ ಗಟ್ಟಿಗೊಳಿಸಬೇಕಿದೆ. ಆಧುನಿಕ ಜೀವನದಲ್ಲಿ ಬದುಕಿನ ಮೌಲ್ಯಗಳನ್ನು ತಿಳಿಸುವಂತಹ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಕಣ್ಮರೆಯಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಪೊಲೀಸ್ ಎಂದರೆ ಭಯವಲ್ಲ, ಭರವಸೆ ಎಂಬ ಧ್ಯೇಯದೊಂದಿಗೆ ಕಾನೂನನ್ನು ಗೌರವಿಸುವರನ್ನು ನಾವು ಗೌರವಿಸುತ್ತೇವೆ ಎಂದು ಸಲಹೆ ನೀಡುವ ಜತೆಗೆ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ ಹಾಗೂ ದೃಶ್ಯ ಮಾಧ್ಯಮಗಳ ಹಾವಳಿಯಿಂದ ಎಚ್ಚರಿಸುವ ಕಾರ್ಯವಾಗಬೇಕಿದೆ. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಹಬಾಳ್ವೆಯಿಂದ ಬದುಕು ಸಾಗಿಸುವ ಸಂದೇಶವನ್ನು ಪೌರಾಣಿಕ ನಾಟಕ ಪ್ರದರ್ಶನ ಮೂಲಕ ತಾಲೂಕಿನ ಪೊಲೀಸರು ಇಂದಿನ ಸಮಾಜದ ಅಂಕುಡೊಂಕುಗಳನ್ನು ತಿದ್ದಿತೀಡುವ ಕಾರ್ಯ ಮಾಡುವ ಮತ್ತು ಸಂಸ್ಕೃತಿ ಉಳಿಸಿ, ಬೆಳಸುವ ಅವರ ಪ್ರಯತ್ನ ಯಶಸ್ಸು ಸಾಧಿಸಲಿ ಎಂದು ನಾಗರಿಕರು ಶುಭಹಾರೈಸಿದ್ದಾರೆ.

ವೃತ್ತ ನಿರೀಕ್ಷಕ ಪ್ರದೀಪ್ ಅವರು ಶ್ರೀ ಕೃಷ್ಣನಾಗಿ, ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಗೌರವಪೂರ್ವಕ ಧರ್ಮರಾಯರಾಗಿ, ಪಿಎಸ್ಸೈ ರಂಗಸ್ವಾಮಿ ೧ನೇ ದುರ್ಯೋಧರಾಗಿ, ಎಸ್ಸೈ ಅವರು ಹಾಗೂ ಪಿಸಿಗಳು ವಿವಿಧ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ.