ಸಾರಾಂಶ
ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ ನಡೆಯಿತು. ಪೂಜೋತ್ಸವದ ಅಂಗವಾಗಿ ಬೆಳಗ್ಗೆ ಕಾವೇರಿ ನದಿಯಿಂದ ಮಂಗಳವಾದ್ಯ ಹಾಗೂ ಸುಮಂಗಲಿಯರಿಂದ ಪೂರ್ಣಕುಂಭ ಕಲಶದೊಂದಿಗೆ ಅಲಂಕೃತ ಮಂಟಪದಲ್ಲಿ ವಿಶ್ವಕರ್ಮ ಮೂರ್ತಿಯನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ ನಡೆಯಿತು.ಪೂಜೋತ್ಸವದ ಅಂಗವಾಗಿ ಬೆಳಗ್ಗೆ ಕಾವೇರಿ ನದಿಯಿಂದ ಮಂಗಳವಾದ್ಯ ಹಾಗೂ ಸುಮಂಗಲಿಯರಿಂದ ಪೂರ್ಣಕುಂಭ ಕಲಶದೊಂದಿಗೆ ಅಲಂಕೃತ ಮಂಟಪದಲ್ಲಿ ವಿಶ್ವಕರ್ಮ ಮೂರ್ತಿಯನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.
ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ವಾಸ್ತುಶಿಲ್ಪಿಯಾಗಿ ಇತಿಹಾಸ ಹೊಂದಿರುವ ವಿಶ್ವಕರ್ಮರ ಆರಾಧನೆ ಮೂಲಕ ಅವರ ಕೊಡುಗೆ ಸ್ಮರಿಸುವ ಕಾರ್ಯವನ್ನು ನಿರಂತರವಾಗಿ ಯುವ ಪೀಳಿಗೆಗೆ ತಿಳಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.ವಿಶ್ವಕರ್ಮ ಸಮಾಜಕ್ಕೆ ಸ್ವಂತ ಭವನ ಹೊಂದಬೇಕೆಂಬ ಬೇಡಿಕೆ ಈಡೇರಿಸಲು ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು.
ಸಮಾಜಕ್ಕೆ ಅಗತ್ಯ ನಿವೇಶನ ಒದಗಿಸಲು ದಾನಿಗಳು ಮುಂದಾಗಿರುವುದು ಉತ್ತಮ ಬೆಳವಣಿಗೆ. ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಮೂಲಕ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅವರು ತಿಳಿಸಿದರು.ಸಮಾಜದ ತಾಲೂಕು ಅಧ್ಯಕ್ಷ ಎಚ್.ಬಿ.ಲಿಂಗಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ವತಿಯಿಂದ ಶಾಸಕ ಡಾ.ಮಂತರ್ ಗೌಡ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಅವರನ್ನು ಗೌರವಿಸಲಾಯಿತು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪಿರಿಯಾಪಟ್ಟಣ ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ಮಹೇಶ್ ಆಚಾರ್ಯ, ಸೋಮವಾರಪೇಟೆ ಗೌಡಳ್ಳಿಯ ಶಿಲ್ಪಿ ಮಂಜುನಾಥ್ ಆಚಾರ್ಯ, ಸಮಾಜದ ಗೌರವಾಧ್ಯಕ್ಷ ವಿ.ಕುಮಾರ್,ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ವರದರಾಜು, ಪ್ರಮುಖರಾದ ವಿ.ಕೃಷ್ಣ, ವಿವಿಧ ಘಟಕಗಳ ಪದಾಧಿಕಾರಿಗಳಾದ ಎಚ್.ಟಿ.ಮಂಜುನಾಥ್, ಜಯಶ್ರೀ, ನಿಂಗಾಚಾರ್, ದುರ್ಗೇಶ್, ರಾಜಮೂರ್ತಿ, ಸದಾನಂದ, ಪ್ರಭಾವತಿ ಲಿಂಗಮೂರ್ತಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸದಸ್ಯರು ಇದ್ದರು.
ಸಮಾಜದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.