ಕುಶಾಲನಗರ: ಆಯುಷ್‌ ಆಸ್ಪತ್ರೆ ಕಟ್ಟಡ ಭೂಮಿಪೂಜೆ

| Published : Oct 16 2024, 12:49 AM IST

ಸಾರಾಂಶ

ಆಯುಷ್ ಇಲಾಖೆ ಆಸ್ಪತ್ರೆಗೆ ಸಂಬಂಧಿಸಿದಂತೆ ಕುಶಾಲನಗರದಲ್ಲಿ ರು. 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡಕ್ಕೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಆಯುಷ್ ಇಲಾಖೆ ಆಸ್ಪತ್ರೆಗೆ ಸಂಬಂಧಿಸಿದಂತೆ ಕುಶಾಲನಗರದಲ್ಲಿ ರು. 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಟ್ಟಡಕ್ಕೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು ಆಯುರ್ವೇದ ಚಿಕಿತ್ಸೆಗೆ ಸಂಬಂಧಪಟ್ಟಂತೆ ರೋಗಿಗಳಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಯೋಜನೆ ಇದಾಗಿದೆ ಎಂದು ಮಾಹಿತಿ ಒದಗಿಸಿದರು.

ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಂದಿ ಮೈಸೂರು, ಮಂಗಳೂರು ಆಸ್ಪತ್ರೆಗಳನ್ನು ಅವಲಂಬಿಸುತ್ತಿದ್ದು ಮುಂದಿನ ದಿನಗಳಲ್ಲಿ ಕುಶಾಲನಗರದಲ್ಲಿ ಎಲ್ಲಾ ಸೌಲಭ್ಯಗಳೊಂದಿಗೆ ಆಯುರ್ವೇದ ಚಿಕಿತ್ಸೆಗೆ ಅವಕಾಶ ಲಭಿಸಲಿದೆ ಎಂದು ಹೇಳಿದರು.

ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಂಬಂಧಿಸಿದ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಕಿವಿಮಾತು ಹೇಳಿದರು.

ಆಸ್ಪತ್ರೆಯ ನಿರ್ವಹಣೆಗಾಗಿ ಹೆಚ್ಚುವರಿ 10 ಲಕ್ಷ ರು. ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪಟ್ಟಣ ಪಂಚಾಯತಿ ಸದಸ್ಯ ವಿ ಎಸ್ ಆನಂದಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ವಿ ಪಿ ಶಶಿಧರ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ ರೇಣುಕಾ ಡಾ. ಆಶ್ರಿತ, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಸ್ಥಳೀಯ ಜನಪ್ರತಿನಿಧಿಗಳು ಇದ್ದರು.

ಕಾವ್ಯಾಗೆ ಪುನೀತ್ ರಾಜಕುಮಾರ್ ಕಲಾರತ್ನ ಸೇವಾ ಪ್ರಶಸ್ತಿ:

ಮಡಿಕೇರಿ: ಸಂಗೀತ ಗಾನ ಲಹರಿ ಕರ್ನಾಟಕ ಯೂತ್ ವೇಲ್ಫೇರ್ ಅಸೋಸಿಯೇಷನ್ ಹಾಗೂ ರಿಯಾಲಿಟಿ ಬುಕ್ ಆಫ್ ವರ್ಡ್ ರೆಕಾರ್ಡ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಕೊಡಗಿನ ಸಮಾಜ ಸೇವ ಕೊಣಿಯಂಡ ಕಾವ್ಯ ಸಂಜು ಶಿವಮೊಗ್ಗ ದ ಸಂಗೀತ ಗಾನ ಲಹರಿ ಸಂಸ್ಥೆಯ ಡಾ.ಪುನೀತ್ ರಾಜಕುಮಾರ್ ಕಲಾ ರತ್ನ ಸೇವಾ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು ಕೊಡಗಿನಲ್ಲಿ ಬಾರಿ ಮಳೆಯಿಂದ ಮನೆಗಳಿಗೆ ಹಾನಿಯುoಟಾದ ಸಂದರ್ಭದಲ್ಲಿ ಹಲವಾರು ಕುಟುಂಬಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸ್ವಯಂ ಪ್ರೇರಣಾ ಬಳಗದ ವತಿಯಿಂದ ಸಾವಿರಾರು ಜನರಿಗೆ ಉಪಯೋಗವಾಗುವಂತೆ ದಿನಸಿ ಕಿಟ್ ವಿತರಣೆ, ರಕ್ತದಾನ ಶಿಬಿರ, ಸಸಿಗಳನ್ನು ನೆಡುವ,ಹಾಗೂ ನೇತ್ರದಾನ, ದೇಹ ದಾನಗಳoತಹ ಮಹತ್ವ ದ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ. ಜೆಸಿಐ ಅಧ್ಯಕ್ಷೆಯಾಗಿದ್ದಾರೆ.