ಕುಶಾಲನಗರ ಬಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

| Published : Aug 30 2024, 01:05 AM IST

ಸಾರಾಂಶ

ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆ ಆಶ್ರಯದಲ್ಲಿ ಕುಶಾಲನಗರ ಫಾತಿಮ ಪ್ರೌಢಶಾಲಾ ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಕುಶಾಲನಗರ ಬಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆ ಆಶ್ರಯದಲ್ಲಿ ಕುಶಾಲನಗರ ಫಾತಿಮ ಪ್ರೌಢಶಾಲಾ ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಕುಶಾಲನಗರ ಬಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮಹತ್ವ ಕುರಿತು ಮಾತನಾಡಿದ ಸರ್ಕಾರಿ ಜೂನಿಯರ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವಯ್ಯ ಎಸ್.ಪಲ್ಲೇದ್ ಪ್ರತಿ ವರ್ಷ ಆ.29 ರಂದು, ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಜನ್ಮದಿನದ ನೆನಪಿಗಾಗಿ ಭಾರತವು ರಾಷ್ಟ್ರೀಯ ಕ್ರೀಡಾ ದಿನ ಆಚರಿಸುತ್ತದೆ.

ಈ ದಿನವನ್ನು ದೇಶದ ಕ್ರೀಡಾ ಸಾಧಕರು ಮತ್ತು ಚಾಂಪಿಯನ್‌ಗಳಿಗೆ ಅವರ ಕೊಡುಗೆ ಮತ್ತು ರಾಷ್ಟ್ರಕ್ಕೆ ಹೆಮ್ಮೆ ತರುವ ನಿಟ್ಟಿನಲ್ಲಿ ಸಮರ್ಪಿಸಲಾಗಿದೆ ಎಂದರು.

ಶಿಸ್ತು, ಪರಿಶ್ರಮ, ಕ್ರೀಡಾ ಮನೋಭಾವ ಮತ್ತು ತಂಡದ ಕೆಲಸ ಸೇರಿದಂತೆ ಕ್ರೀಡೆಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಗುರಿಯನ್ನು ಇದು ಹೊಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ವ್ಯವಸ್ಥಾಪಕ ಫಾ. ಎಂ.ಮಾರ್ಟಿನ್ ‌ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕ್ರೀಡಾಜ್ಯೋತಿ ಬೆಳಗಿಸಿದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಮಾತನಾಡಿ, ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಸೂಕ್ತ ವೇದಿಕೆ ಒದಗಿಸುತ್ತವೆ ಎಂದರು.

ಫಾತಿಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಫ್ರಿ ಡಿಸಿಲ್ವ, ಕ್ರೀಡಾಕೂಟದ ಕಾರ್ಯದರ್ಶಿ ಎ.ಎ.ಲಕ್ಷ್ಮಣ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮೌಲಾನ ಅಜಾದ್ ಶಾಲೆ ಪ್ರಾಂಶುಪಾಲ ಶ್ವೇತ ,

ಸಿ.ಆರ್.ಪಿ. ಟಿ.ಇ.ವಿಶ್ವನಾಥ್, ಪ್ರೌಢಶಾಲಾ ಪೋಷಕರ ಪ್ರತಿನಿಧಿ ಕುಮಾರ್,

ಶಿಕ್ಷಕರ ಸಂಘಟನೆಯ ಪ್ರಮುಖ ದಯಾನಂದ ಪ್ರಕಾಶ್, ಎಂ.ಎಸ್. ಮಹೇಂದ್ರ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಪ್ರೆಸ್ ಕ್ಲಬ್ ಟ್ರಸ್ಟ್ ಅಧ್ಯಕ್ಷ ಎಚ್.ಎಂ.ರಘು, ಶಿರಂಗಾಲ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಶೈಲಾ, ಫಾತಿಮ ಪ್ರೌಢಶಾಲೆಯ

ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಮತ್ತಿತರರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಡಾ ಸದಾಶಿವಯ್ಯ ಪಲ್ಲೇದ್, ದೈಹಿಕ ಶಿಕ್ಷಕ ಎ.ಎ.ಲಕ್ಷ್ಮಣ್, ಮುಖ್ಯ ಶಿಕ್ಷಕಿ ‌ಬಿ.ಎನ್.ಪುಷ್ಪ, ಸಿಆರ್‌ಪಿಟಿಇ ವಿಶ್ವನಾಥ್, ಪೋಷಕರ ಪ್ರತಿನಿಧಿ ಕುಮಾರ್ ಅವರನ್ನು ಗೌರವಿಸಲಾಯಿತು.