ಸಂಸತ್‌ ದಾಳಿ ಘಟನೆ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

| Published : Dec 16 2023, 02:01 AM IST

ಸಂಸತ್‌ ದಾಳಿ ಘಟನೆ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂಸತ್‌ನಲ್ಲಿ ನಡೆದ ಘಟನೆ ಖಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮೈಸೂರು ಲೋಕಸಭಾ ಸದಸ್ಯರನ್ನು ತಕ್ಷಣ ವಜಾ ಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಸಂಸತ್‌ನಲ್ಲಿ ನಡೆದ ಘಟನೆ ಖಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮೈಸೂರು ಲೋಕಸಭಾ ಸದಸ್ಯರನ್ನು ತಕ್ಷಣ ವಜಾ ಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಮುಖ್ಯರಸ್ತೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಮಾನವ ಸರಪಳಿ ರಚಿಸಿದರು. ಘಟನೆಗೆ ಪ್ರಮುಖ ಕಾರಣಕರ್ತರಾದ ಸಂಸದ ಪ್ರತಾಪ್ ಸಿಂಹ ವಿರುದ್ಧ ಘೋಷಣೆ ಕೂಗಿದರು. ಕೇಂದ್ರದಲ್ಲಿ ಮೋದಿ ಸರ್ಕಾರ ಭದ್ರತಾ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ತಕ್ಷಣ ರಾಜಿನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕ್ಷೇತ್ರದಲ್ಲಿ ಅನಾವಶ್ಯಕ ಗೊಂದಲ ಮೂಡಿಸುತ್ತಾ ಕಾಲ ಕಳೆದ ಪ್ರತಾಪ್ ಸಿಂಹ ಈ ಘಟನೆಗೆ ಪ್ರಮುಖ ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ತಕ್ಷಣ ಅವರ ಮೇಲೆ ನಿಯಮ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿದರು. ಈ ಸಂದರ್ಭ ಪಕ್ಷದ ಪ್ರಮುಖರಾದ ನಟೇಶ್ ಗೌಡ, ನಗರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಕಲೀಮುಲ್ಲಾ, ಜೆ. ಫಿಲೋಮಿನಾ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.