ಕುಶಾಲನಗರ ಮಾಂಸ ಮಳಿಗೆ ಆವರಣ ಸ್ವಚ್ಛತೆ ಪಾಲನೆ ಕಡ್ಡಾಯ

| Published : Sep 11 2024, 01:03 AM IST

ಸಾರಾಂಶ

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಾಂಸ ಮಳಿಗೆಗಳ ಆವರಣದಲ್ಲಿ ಸ್ವಚ್ಛತೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಕುಶಾಲನಗರ ಪುರಸಭೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಪಟ್ಟಣದ ಕುರಿ, ಆಡು, ಕೋಳಿ, ಮೀನು, ಮಾಂಸ ಮಳಿಗೆಗಳ ವ್ಯಾಪಾರಿಗಳ ಸಭೆಯಲ್ಲಿ ಈ ಬಗ್ಗೆ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಮತ್ತು ಆರೋಗ್ಯ ಅಧಿಕಾರಿ ಉದಯ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಾಂಸ ಮಳಿಗೆಗಳ ಆವರಣದಲ್ಲಿ ಸ್ವಚ್ಛತೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಕುಶಾಲನಗರ ಪುರಸಭೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಪಟ್ಟಣದ ಕುರಿ, ಆಡು, ಕೋಳಿ, ಮೀನು, ಮಾಂಸ ಮಳಿಗೆಗಳ ವ್ಯಾಪಾರಿಗಳ ಸಭೆಯಲ್ಲಿ ಈ ಬಗ್ಗೆ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಮತ್ತು ಆರೋಗ್ಯ ಅಧಿಕಾರಿ ಉದಯ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಂಸ ಮಳಿಗೆಗಳ ತ್ಯಾಜ್ಯ ವಿಲೇವಾರಿಗೆ ಪುರಸಭೆಯಿಂದ ಪ್ರತ್ಯೇಕ ವಾಹನ ನಿಗದಿಪಡಿಸಲಾಗಿದ್ದು ಮಾಂಸ ತ್ಯಾಜ್ಯಗಳನ್ನು ಅದರಲ್ಲಿ ತುಂಬಿ ಕಳುಹಿಸುವಂತೆ ಸಲಹೆ ನೀಡಿದ್ದಾರೆ.

ಮಾರುಕಟ್ಟೆ ಮಳಿಗೆಗಳಿಗೆ ಅನುಸರಿಸುವಂತೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಮಳಿಗೆಗಳಲ್ಲಿ ಸ್ವಚ್ಛತೆ ಕಾಪಾಡುವುದು, ಮಾರಾಟಕ್ಕೆ ನಿರ್ಬಂಧ ಗೊಳಿಸಿರುವ ದಿನಗಳಲ್ಲಿ ಮಳಿಗೆಗಳನ್ನು ಬಂದ್ ಮಾಡುವುದು. ಗುಣಮಟ್ಟದ ಮಾಂಸ ಮೀನುಗಳನ್ನು ಮಾರಾಟ ಮಾಡುವುದು ಈ ಬಗ್ಗೆ ಯಾವುದೇ ದೂರುಗಳು ಬಂದಲ್ಲಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೃಷ್ಣ ಪ್ರಸಾದ್ ಎಚ್ಚರಿಕೆ ನೀಡಿದರು.

ಮಾಂಸ ಮಳಿಗೆಗಳ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡುವುದು ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಅಧಿಕಾರಿ ಉದಯಕುಮಾರ್ ಸೂಚನೆ ನೀಡಿದ್ದಾರೆ.

ಸಮೀಪದ ಗಡಿ ಭಾಗದ ಕೊಪ್ಪ ಭಾಗದಿಂದ ಮಾಂಸದ ತ್ಯಾಜ್ಯಗಳನ್ನು ಕುಶಾಲನಗರ ಭಾಗಕ್ಕೆ ತಂದು ಸುರಿಯುತ್ತಿರುವ ಬಗ್ಗೆಯೂ ಕೆಲವು ದೂರುಗಳು ಕೇಳಿ ಬಂದಿದ್ದು ಈ ಬಗ್ಗೆ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿ ಮತ್ತು ಸಾರ್ವಜನಿಕರ ದೂರಿನ ಮೇಲೆ ಕ್ರಮಕ್ಕೆ ಮುಂದಾಗುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.