ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಅವರು ಕುಶಾಲನಗರದಲ್ಲಿ ಹಿಂದೂ ಹಿತ ರಕ್ಷಣಾ ಸಮಿತಿ ಆಶ್ರಯದಲ್ಲಿ ನಡೆದ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದುಗಳ ಪರಿಸ್ಥಿತಿ ಚಿಂತಾಜನಕವಾಗಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆಯ ಕೊರತೆ ಎದುರಾಗಿದೆ. ತಕ್ಷಣ ಕೇಂದ್ರ ಸರ್ಕಾರ ಮಧ್ಯಪ್ರದೇಶ ಬೇಕಾಗಿದೆ ಮತ್ತು ಬಾಂಗ್ಲಾ, ಆಫ್ಘಾನಿಸ್ತಾನ ಮತ್ತಿತರ ದೇಶಗಳು ಸೇರಿದಂತೆ ಮುಂದಿನ ದಿನಗಳಲ್ಲಿ ಅಖಂಡ ಭಾರತ ನಿರ್ಮಾಣದ ಅಗತ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು, ಕುಶಾಲನಗರ ಗಣಪತಿ ದೇವಾಲಯ ಬಳಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೃತ್ಯವನ್ನು ಖಂಡಿಸಿದರು.ಈ ಸಂದರ್ಭ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಪ್ರಮುಖರಾದ ಬಿ.ಬಿ. ಭಾರತೀಶ್, ಜಿ.ಎಲ್. ನಾಗರಾಜ್, ಗೌತಮ್, ಎಂ.ಎಂ. ಚರಣ್, ಅಮೃತ್ ರಾಜ್, ಸಂತೋಷ್, ಮಂಜುನಾಥ್ ಹೇರೂರು, ಚಂದ್ರಶೇಖರ್, ಮಧುಸೂದನ್, ಮಂಡೆಪಂಡ ಬೋಸ್ ಮೊಣಪ್ಪ, ನವನೀತ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.