ಕುಶಾಲನಗರ: ಸ್ವಚ್ಛತಾ ಹೀ ಸೇವಾ ಶ್ರಮದಾನ ಸಂಪನ್ನ

| Published : Oct 03 2024, 01:18 AM IST

ಕುಶಾಲನಗರ: ಸ್ವಚ್ಛತಾ ಹೀ ಸೇವಾ ಶ್ರಮದಾನ ಸಂಪನ್ನ
Share this Article
  • FB
  • TW
  • Linkdin
  • Email

ಸಾರಾಂಶ

ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಬುಧವಾರ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಮತ್ತು ಸ್ವಚ್ಚತಾ ಹೀ ಸೇವಾ ಶ್ರಮದಾನ ನಡೆಯಿತು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ, ಕುಶಾಲನಗರ ಪುರಸಭೆಯ ಕಾರ್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಬುಧವಾರ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಮತ್ತು ಸ್ವಚ್ಚತಾ ಹೀ ಸೇವಾ ಶ್ರಮದಾನ ನಡೆಯಿತು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ, ಕುಶಾಲನಗರ ಪುರಸಭೆಯ ಕಾರ್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಸಹಯೋಗದೊಂದಿಗೆ

ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಶಾಲಾವರಣದಲ್ಲಿ ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಮೂಲಕ ಸ್ವಚ್ಚತಾ ಆಂ

ದೋಲನಕ್ಕೆ ಚಾಲನೆ ನೀಡಲಾಯಿತು.

ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಸ್ವಚ್ಚತಾ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿದ ಸ್ಕೌಟ್ಸ್, ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಮ್ಮನ್ನು ಸದಾ ಕಾಲ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ ಮತ್ತು ಗೈಡ್ ಸಹಕಾರಿಯಾಗಲಿದೆ ಎಂದರು.

ಸ್ವಚ್ಛತೆಯೇ ಸೇವೆ ಕುರಿತು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರ ಸ್ವಚ್ಛಗೊಳಿಸಿ ಸ್ವಚ್ಛ ಭಾರತ ಅಭಿಯಾನದ ಮೂಲಕ ಸುಂದರ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದರು.

ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಸಿ.ಉದಯಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ನಗರ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಫಾತಿಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿಸಿಲ್ವ, ಜಿಲ್ಲಾ ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ತಮ್ಮಯ್ಯ, ಕಾರ್ಯದರ್ಶಿ

ಎಂ.ಎಸ್.ಗಣೇಶ್, ಕೋಶಾಧಿಕಾರಿ ನರೇಶ್ ಕುಮಾರ್, ಲಯನ್ಸ್ ಕ್ಲಬ್ ನ ವಲಯಾಧಿಕಾರಿ ಸುಮನ್ ಬಾಲಚಂದ್ರ, ಲಯನ್ಸ್ ಸಂಸ್ಥೆಯ ಪ್ರಮುಖರಾದ ಕೊಡಗನ ಹರ್ಷ, ಕಿರಣ್, ಸತೀಶ್, ಮನೋಹರ್, ರವಿ, ರಾಜೇಶ್, ಲಯನ್ಸ್ ಕ್ಲಬ್ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಶಾಲೆಯ ಇಕೋ ಕ್ಲಬ್ ಸ್ತುವಾರಿ ಶಿಕ್ಷಕ ಕಿರಣ್, ಸ್ಕೌಟ್ಸ್ ಮಾಸ್ಟರ್ ಎಂ.ಎಲ್.ಜಾನ್ ಸನ್, ಗೈಡ್ಸ್‌ ಶಿಕ್ಷಕಿ ಬಿ.ಎಂ.ಶಿಫಾನ, ಸ್ವಚ್ಚತಾ ಮೇಲ್ವಿಚಾರಕ ಎಚ್.ಎನ್.ಮೋಹನ್ ಕುಮಾರ್, ಪೌರ ಕಾರ್ಮಿಕರು, ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು, ಸ್ವಯಂ ಸೇವಕರು, ‌‍ ಶಾಲಾ ವಿದ್ಯಾರ್ಥಿಗಳು ಇದ್ದರು.

ಫಾತಿಮ ಪ್ರೌಢಶಾಲಾ ಆವರಣ, ಅಂಚೆ ಕಚೇರಿ ರಸ್ತೆ ಹಾಗೂ ಕಾವೇರಿ ನದಿ ಸಂಪರ್ಕಿಸುವ ಅಯ್ಯಪ್ಪಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಪುರಸಭೆ ಪೌರ ಕಾರ್ಮಿಕರ ಜತೆಗೂಡಿದ ಶಿಕ್ಷಕರು, ಸ್ಕೌಟ್ಸ್, ಗೈಡ್ಸ್ ಸ್ವಯಂ ಸೇವಕರು, ವಿದ್ಯಾರ್ಥಿಗಳು ಶ್ರಮದಾನ ಕಾರ್ಯದಲ್ಲಿ ಭಾಗಿಗಳಾಗಿ ಸ್ವಚ್ಚತೆ ಕೈಗೊಂಡರು.