ಕುಶಾಲನಗರದ ವಾಸವಿ ಮಹಲ್ ಸಭಾಂಗಣದಲ್ಲಿ 15ರಂದು ಬಿರ್ಸಾ ಮುಂಡಾ 151ನೇ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್.ಟಿ.ಮೋರ್ಚಾ ಅಧ್ಯಕ್ಷ ಎಂ.ಎಂ.ಪರಮೇಶ್ವರ ತಿಳಿಸಿದರು.

ಕುಶಾಲನಗರ : ಕುಶಾಲನಗರದ ವಾಸವಿ ಮಹಲ್ ಸಭಾಂಗಣದಲ್ಲಿ 15ರಂದು ಬಿರ್ಸಾ ಮುಂಡಾ 151ನೇ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್.ಟಿ.ಮೋರ್ಚಾ ಅಧ್ಯಕ್ಷ ಎಂ.ಎಂ.ಪರಮೇಶ್ವರ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಬಿಜೆಪಿ ಎಸ್.ಟಿ.ಮೋರ್ಚಾ ಆಶ್ರಯದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನ.15 ರಂದು ದೇಶದಾದ್ಯಂತ ಬಿರ್ಸಾ ಮುಂಡಾ ಜಯಂತಿ‌ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನ ಜಾತಿಯ ಗೌರವ್ ದಿವಸ್ -2026, ಪ್ರಮುಖ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಕೆ.ಚಂದ್ರ ಮಾತನಾಡಿ, ಬಿರ್ಸಾ ಮುಂಡಾ ಅವರ ಕೊಡುಗೆಯ ಬಗ್ಗೆ ಆದಿವಾಸಿ ಸಮುದಾಯ ಅರಿತುಕೊಳ್ಳಬೇಕಿದೆ ಎಂದರು.ಎಸ್.ಟಿ.ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಆರ್. ಪ್ರಭಾಕರ್ ಮಾತನಾಡಿ, ಅಂದಿನ ಕಾರ್ಯಕ್ರಮದಲ್ಲಿ ಸಮುದಾಯದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಗೋಷ್ಠಿಯಲ್ಲಿ ವಿರಾಜಪೇಟೆ ಮಂಡಲ ಎಸ್.ಟಿ.ಮೋರ್ಚಾ ಅಧ್ಯಕ್ಷ‌ ಮುತ್ತುರಾಜ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಮಲ್ಲೇಶ್ ಇದ್ದರು.