ಸಾರಾಂಶ
ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ನಡೆಯಿತು. ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ಸಾಂಪ್ರದಾಯಿಕವಾಗಿ ನಡೆಯಿತು.ಕುಶಾಲನಗರ ಗೌಡ ಸಮಾಜ ಮತ್ತು ಸಹ ಸಂಘಟನೆಗಳಾದ ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಗೌಡ ಸಮಾಜದಲ್ಲಿ ಸೇರಿ ಸಾಂಪ್ರದಾಯಿಕ ಕಾರ್ಯಗಳ ನಂತರ ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಮೀಪದ ಹಾರಂಗಿ ರಸ್ತೆಯ ಗೌಡ ಯುವಕ ಸಂಘದ ಗದ್ದೆಯಲ್ಲಿ ಕದಿರು ತೆಗೆಯಲಾಯಿತು.
ಸಮಾಜದ ಉಪಾಧ್ಯಕ್ಷರಾದ ಕುಲಚೆಟ್ಟಿ ಕಾಶಿ ಪೂವಯ್ಯ ಅವರು ಗದ್ದೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು.ಸಮಾಜ ಬಾಂಧವರಿಗೆ ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಹಾರಂಗಿ ರಸ್ತೆಯಲ್ಲಿರುವ ಗೌಡ ಯುವಕ ಸಂಘದ ಕಚೇರಿಗೆ ಭೇಟಿ ನೀಡಿ ಸಮುದಾಯ ಬಾಂಧವರಿಗೆ ಹುತ್ತರಿ ಶುಭಾಶಯ ಕೋರಿದರು.ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಉಪಾಧ್ಯಕ್ಷರಾದ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲ್ಲಚನ ಹೇಮಂತ್, ಬಲ್ಲಡ್ಕ ವಿಜಯ್ ಕುಮಾರ್, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಸೂದನ ಲಲಿತ ಗಣೇಶ್, ಸಹ ಕಾರ್ಯದರ್ಶಿ ದಬ್ಬಡ್ಕ ಡಾಟಿ ಶಾಂತಕುಮಾರಿ ಮತ್ತು ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು, ಸಾರ್ವಜನಿಕರು ಇದ್ದರು.