ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಮಂತರ್ ಗೌಡ ಹೇಳಿದರು. ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2026-27 ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಕುಶಾಲನಗರ: ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಮಂತರ್ ಗೌಡ ಹೇಳಿದರು.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2026-27 ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ತಮ್ಮ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದು ಹೇಳಿದರು.ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ವೈಜ್ನಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.ಸಂಪನ್ಮೂಲ ವ್ಯಕ್ತಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಧ್ಯಾಪಕಿ ಡಾ.ರೇವತಿ ಪೂವಯ್ಯ ಕೊಡಗಿನ ಸಾಂಸ್ಕ್ರತಿಕ ಹಿನ್ನೆಲೆ ಮತ್ತು ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು.
ಐಕ್ಯೂಎ ಸಂಚಾಲಕಿ ಡಾ. ಮಧುಶ್ರೀ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಕೆ.ಪಿ. ಕುಸುಮ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪಿ.ಪಿ.ಜಯಂತಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಸಿ.ಹೆಚ್. ರವಿ, ಬಿ.ನಮೀತ, ದಳದ ನಾಯಕರು ರೋವರ್ ಡಾ.ಬಿ.ಕೆ.ಕುಮಾರ್, ಯುವ ರೆಡ್ ಕ್ರಾಸ್ ಸಂಚಾಲಕ ಡಾ.ಎನ್.ಎನ್.ಕುಮಾರ್, ಕಾಲೇಜು ಅಧೀಕ್ಷಕ ಕೆ.ಪಿ. ಮೋಹನ್‌ಕುಮಾರ್ , ವಿದ್ಯಾರ್ಥಿ ಸಮಿತಿ ಉಪಾಧ್ಯಕ್ಷ ಎಂ.ಆರ್.ಸಾಗರ್ , ಕಾರ್ಯದರ್ಶಿ ಎಸ್.ಸಂದೇಶ್, ಮಹಿಳಾ ಕಾರ್ಯದರ್ಶಿ ಕೆ.ಎಸ್.ಕೀರ್ತನಾ, ಸಾಂಸ್ಕೃತಿಕ ಕಾರ್ಯದರ್ಶಿ ಡೆಲ್ವಿನ್ ಲೋಬೊ, ಮಹಿಳಾ ಸಾಂಸ್ಕೃತಿಕ ಕಾರ್ಯದರ್ಶಿ ಎಸ್.ಮಾನ್ಯ, ಕ್ರೀಡಾ ಕಾರ್ಯದರ್ಶಿ ಎಸ್.ಹರ್ಷ, ಮಹಿಳಾ ಕ್ರೀಡಾ ಕಾರ್ಯದರ್ಶಿ ಹೆಚ್.ಹೆಚ್.ಕೃತಿಕಾ, ಜಂಟಿ ಕಾರ್ಯದರ್ಶಿ ಜಿ.ಎಲ್.ರಂಗಸ್ವಾಮಿ, ಮಹಿಳಾ ಜಂಟಿ ಕಾರ್ಯದರ್ಶಿ ಎಸ್.ಅನನ್ಯ ಪಾಲ್ಗೊಂಡಿದ್ದರು.