ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.
ಕುಶಾಲನಗರ: ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಪಾಲನ ವರದಿ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಇಲಾಖಾವಾರು ಅಧಿಕಾರಿಗಳು ಇಲಾಖೆಯಲ್ಲಿ ಕೈಗೊಂಡ ಕಾರ್ಯಕ್ರಮ ಅನುಷ್ಠಾನ ಮತ್ತು ಪ್ರಗತಿ ಬಗ್ಗೆ ಸಭೆಗೆ ಮಾಹಿತಿ ಒದಗಿಸಿದರು.
ಬಸವನಹಳ್ಳಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ ಎಂಬ ದೂರಿನ ಬಗ್ಗೆ ಅಧ್ಯಕ್ಷರು ಸಿಡಿಪಿಓ ಶ್ರೀದೇವಿ ಅವರನ್ನು ಪ್ರಶ್ನಿಸಿದರು. ಶ್ರೀದೇವಿ ಈ ಬಗ್ಗೆ ಮಾಹಿತಿ ನೀಡಿ, ಈ ವಿಷಯ ಕುರಿತು ಉಪ ನಿರ್ದೇಶಕರ ಗಮನಕ್ಕೆ ತಂದ ಬಳಿಕ ಅವರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಯಕರ್ತೆಯನ್ನು ಬೇರೆ ಕೇಂದ್ರಕ್ಕೆ ವರ್ಗಾವಣೆ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.ಜೇನುಕಲ್ಲು ಬೆಟ್ಟದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಗೆ ತಿಳಿವಳಿಕೆ ನೋಟಿಸ್ ನೀಡಿದ ಮೇರೆಗೆ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಪ್ರತಿ ಅಂಗನವಾಡಿ ಕೇಂದ್ರಗಳಲ್ಲೂ ಬಾಲವಿಕಾಸ ಸಮಿತಿ ರಚಿಸಿ ಉತ್ತಮ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಶಶಿಧರ್ ಅಧಿಕಾರಿಗೆ ಸೂಚನೆ ನೀಡಿದರು.
ಗೃಹ ಜ್ಯೋತಿ ಯೋಜನೆ ಮಾಹಿತಿ ನೀಡಿದ ಚೆಸ್ಕಾಂ ಅಧಿಕಾರಿಗಳು ಒಟ್ಟು 36133 ಮನೆಗಳ ಪೈಕಿ 26045 ನೊಂದಾಯಿಸಲಾಗಿದೆ. ಬಾಕಿ 10088 ಬಾಕಿ ಇದೆ. ನಗರ ಪ್ರದೇಶದಲ್ಲಿ ಶೇ.70 ಗುರಿ ಸಾಧಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸ್ವಲ್ಪ ವಿಳಂಬವಾಗಿದೆ ಎಂದು ತಿಳಿಸಿದರು.ತಾಲೂಕು ವ್ಯಾಪ್ತಿಯಲ್ಲಿ ಅಪಾಯಕಾರಿ 84 ಕಬ್ಬಿಣದ ವಿದ್ಯುತ್ ಕಂಬಗಳಿದ್ದು, ಅನುದಾನ ಬಂದ ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಯುವ ನಿಧಿಗೆ ನೊಂದಾಯಿಸುವವರ ಸಂಖ್ಯೆಯಲ್ಲಿ ರಾಜ್ಯದಲ್ಲಿ ಕೊಡಗು ಕೊನೆ ಸ್ಥಾನದಲ್ಲಿದೆ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿ ಮಂಜುನಾಥ್ ಎಲ್ಲಾ ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ನೀಡುತ್ತಿದ್ದೇವೆ ಎಂದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ತಾಲೂಕು ಗ್ಯಾರಂಟಿ ಸಮಿತಿ ವತಿಯಿಂದ ಅಳುವಾರ ವಿವಿಯಲ್ಲಿ ನಡೆಸಿದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಯಶಸ್ವಿಯಾಗಿದೆ. ಇಂತಹ ಕಾರ್ಯಾಗಾರಗಳು ಆಗಾಗ ನಡೆಸಬೇಕು ಎಂದು ಶಶಿಧರ್ ಹೇಳಿದರು.ಶೀಘ್ರದಲ್ಲಿ ತಾಲೂಕಿನಲ್ಲಿ ಉದ್ಯೋಗ ಮೇಳ ಆಯೋಜಿಸುವ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಅರ್ಜಿ ತಿರಸ್ಕಾರ ಆರೋಪ : ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಪಡೆಯಲು ಗ್ರಾಮ ಒನ್ ನಿಂದ ಅರ್ಜಿ ಹಾಕಿದರೆ ಎಲ್ಲಾ ದಾಖಲೆಗಳು ಸರಿ ಇದ್ದರೂ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಒಬ್ಬರು ಅನವಶ್ಯಕವಾಗಿ ಅರ್ಜಿ ತಿರಸ್ಕಾರ ಮಾಡುತ್ತಾರೆ ಎಂದು ಗ್ರಾಮ ಒನ್ ಸೇವಾ ಕೇಂದ್ರದ ಸಿಬ್ಬಂದಿಗಳು ಸಭೆಯಲ್ಲಿ ದೂರಿದರು.
ಈ ಬಗ್ಗೆ ತಹಸೀಲ್ದಾರ್ ಅವರ ಮೂಲಕ ಸಂಬಂಧಿಸಿದ ಸಿಬ್ಬಂದಿಗೆ ಎಚ್ಚರಿಕೆಯ ನೋಟಿಸ್ ನೀಡುವಂತೆ ಶಶಿಧರ್ ಸೂಚನೆ ನೀಡಿದರು.ಸಮಿತಿ ಜಿಲ್ಲಾ ಉಪಾಧ್ಯಕ್ಷ ಶಶಿ ಭೀಮಯ್ಯ, ಸದಸ್ಯರಾದ ಮುಸ್ತಫ, ಕೂಡಿಗೆ ಅಣ್ಣಯ್ಯ, ತಾಲೂಕು ಸಮಿತಿ ಸದಸ್ಯರಾದ ಬಿ.ಸಿ.ಮಲ್ಲಿಕಾರ್ಜುನ, ಕೆ.ಇ.ಅಬ್ದುಲ್ ರಜಾಕ್, ಜೆ.ಫಿಲೋಮಿನಾ, ಎಸ್.ಎಸ್.ವಿವೇಕಾನಂದ, ಎಸ್.ಎ.ಶ್ರೀನಿವಾಸ, ಎನ್.ಶ್ರೀನಿವಾಸ್ ಕುಮಾರ್, ಯು.ಎಂ.ಕಿಶೋರ್, ಹೆಚ್.ಯು.ರಫೀಕ್ ಖಾನ್, ಎಂ.ಎ.ಆದಂ, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ ಹಾಗೂ ಸಿಬ್ಬಂದಿ ಇದ್ದರು.
ಶ್ರೀದೇವಿ ಗೃಹಲಕ್ಷ್ಮಿ ಯೋಜನೆ ಮಾಹಿತಿ ನೀಡಿದರು. ಸಮಿತಿ ಸದಸ್ಯ ಕೃಷ್ಣೇಗೌಡ ಮಾತನಾಡಿ,