ಸಾರಾಂಶ
ಕುಶಾಲನಗರದಲ್ಲಿ ಕಾವೇರಿ ಆರತಿ ಬಳಗದಿಂದ 168ನೇ ಮಹಾ ಆರತಿ ಕಾರ್ಯಕ್ರಮ ನೆರವೇರಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮತ್ತಿತರರು ಪಾಲ್ಗೊಂಡರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ನದಿ, ಪ್ರಕೃತಿ ಸಂಸ್ಕೃತಿಯ ಪ್ರತೀಕವಾಗಿದ್ದು ಅವುಗಳು ನಾಶವಾಗದಂತೆ ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.ಕುಶಾಲನಗರದಲ್ಲಿ ಕಾವೇರಿ ಆರತಿ ಬಳಗದಿಂದ ನಡೆದ 168ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಆ ಮೂಲಕ ಸ್ವಚ್ಛ ಗ್ರಾಮಗಳ ನಿರ್ಮಾಣ ಸಾಧ್ಯ ಎಂದರು.ಅರ್ಚಕ ಕೃಷ್ಣಮೂರ್ತಿ ಭಟ್ ಕುಂಕುಮಾರ್ಚನೆ, ಅಷ್ಟೋತ್ತರ ನಂತರ ಸಾಮೂಹಿಕವಾಗಿ ನದಿಗೆ ಆರತಿ ಬೆಳಗಿದರು.
ಕಾವೇರಿ ಆರತಿ ಬಳಗದ ಆಶ್ರಯದಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ಕಾರ್ಯಕರ್ತರು ನದಿ ಮತ್ತು ತಟದಲ್ಲಿ ತ್ಯಾಜ್ಯಗಳನ್ನು ತೆರವುಗೊಳಿಸಿದರು.ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಕುಶಾಲನಗರ ಡಿವೈಎಸ್ಪಿ ಆರ್‌ವಿ ಗಂಗಾಧರಪ್ಪ, ಅಯ್ಯಪ್ಪ ಸ್ವಾಮಿ ದೇವಾಲಯ ಟ್ರಸ್ಟ್ ಅಧ್ಯಕ್ಷ ಬಿ ಪಿ ಗಣಪತಿ, ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ರೋಹಿತ್, ವಲಯ ಮೇಲ್ವಿಚಾರಕಿ ಪೂರ್ಣಿಮಾ, ಜನಜಾಗೃತಿ ವೇದಿಕೆ ಸದಸ್ಯ ವಿ ಡಿ ಪುಂಡರಿಕಾಕ್ಷ ,ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಡಿ ಆರ್ ಸೋಮಶೇಖರ್, ಪವನ್, ಚೈತನ್ಯ, ಧರಣಿ ಸೋಮಯ್ಯ ಮತ್ತಿತರರಿದ್ದರು.