ಕನ್ನಡಪ್ರಭ ವಾರ್ತೆ ಕುಶಾಲನಗರ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.ಕುಶಾಲನಗರ ಟೌನ್ ಕಾಂಗ್ರೆಸ್ ಅಧ್ಯಕ್ಷರಾದ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಸ್ಥಳೀಯ ಗಣಪತಿ ದೇವಾಲಯ ಮುಂಭಾಗ ಸೇರಿದ ಕಾರ್ಯಕರ್ತರು ಡಿಕೆಶಿ ಮತ್ತು ಪಕ್ಷದ ಪರವಾಗಿ ಘೋಷಣೆ ಕೂಗಿದರು.ಈ ಸಂದರ್ಭ ಮಾತನಾಡಿದ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಮತ್ತು ಕೆಪಿಸಿಸಿ ಸದಸ್ಯರಾದ ಮಂಜುನಾಥ ಗುಂಡುರಾವ್ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನಡೆಯಲಿದೆ. ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿದೆ ಎಂದು ಆಶಾ ಭಾವನೆ ವ್ಯಕ್ತಪಡಿಸಿದರು.
ಕುಶಾಲನಗರ: ಡಿಕೆಶಿ ಪದಗ್ರಹಣ ಸಂಭ್ರಮಾಚರಣೆ
ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.