ಸಾರಾಂಶ
101 ಗಣಪತಿ ಮೂರ್ತಿಗಳಿಗೆ ಶ್ರದ್ಧಾ ಭಕ್ತಿಯಿಂದ ರಂಗಪೂಜೆ ನಡೆಯಿತು. ಪ್ರತಿದಿನ ವಿಶೇಷ ಪೂಜೆ ನೆರವೇರಿತು.
ಕುಶಾಲನಗರ: ಗಣೇಶೋತ್ಸವದ ಅಂಗವಾಗಿ ಕುಶಾಲನಗರದ ರಥ ಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ 101 ಗಣಪತಿ ಮೂರ್ತಿಗಳಿಗೆ ಶ್ರದ್ಧಾಭಕ್ತಿಯಿಂದ ರಂಗಪೂಜೆ ನಡೆಯಿತು.ಕುಶಾಲನಗರ ವಾಸವಿ ಯುವಕ ಸಂಘದ ವತಿಯಿಂದ ಆರ್ಯವೈಶ್ಯ ಮಂಡಳಿಯ ಸಹಯೋಗದೊಂದಿಗೆ 101 ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ಪ್ರತಿದಿನ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಆ.31 ರಂದು 101 ಗಣಪತಿ ಮೂರ್ತಿಗಳನ್ನು ಭವ್ಯ ಮೆರವಣಿಗೆಯ ಮೂಲಕ ಕೊಂಡೊಯ್ದು ವಿಸರ್ಜಿಸಲಾಗುವುದು ಎಂದು ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದರು. ಈ ಸಂದರ್ಭ ವಾಸವಿ ಯುವಕ ಸಂಘದ ಅಧ್ಯಕ್ಷ ಪ್ರವೀಣ್ ಹಾಗೂ ಪದಾಧಿಕಾರಿಗಳು ಇದ್ದರು.