ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ಸಾಂಪ್ರದಾಯಿಕವಾಗಿ ಅದ್ಧೂರಿಯಾಗಿ ನಡೆಯಿತು.ಕುಶಾಲನಗರ ಗೌಡ ಸಮಾಜ ಮತ್ತು ಸಹ ಸಂಘಟನೆಗಳಾದ ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಗೌಡ ಸಮಾಜದಲ್ಲಿ ಸೇರಿ ಸಾಂಪ್ರದಾಯಿಕ ಕಾರ್ಯಗಳ ನಂತರ ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಮೀಪದ ಹಾರಂಗಿ ರಸ್ತೆಯ ಗೌಡ ಯುವಕ ಸಂಘದ ಗದ್ದೆಯಲ್ಲಿ ಕದಿರು ತೆಗೆಯಲಾಯಿತು. ಸಮಾಜದ ಉಪಾಧ್ಯಕ್ಷರಾದ ಕುಲಚೆಟ್ಟಿ ಕಾಶಿ ಪೂವಯ್ಯ ಅವರು ಗದ್ದೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು.ಸಮಾಜ ಬಾಂಧವರಿಗೆ ಹಾಗೂ ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು.ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಉಪಾಧ್ಯಕ್ಷರಾದ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲಚನ ಹೇಮಂತ್, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಕರಂದ್ಲಾಜೆ ಕಲಾ ಆನಂದ್, ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚೀಯಂಡಿ ಶಾಂತಿ, ಗೌಡ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸೂದನ ಗೋಪಾಲ್, ನಿವೃತ್ತ ಗೌಡ ಸೈನಿಕರ ಒಕ್ಕೂಟದ ವೇದಿಕೆ ಅಧ್ಯಕ್ಷ ದೇವಜನ ಚಿನ್ನಪ್ಪ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಸಮಾಜದ ಅಂಗ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಇದ್ದರು.
ಕುಶಾಲನಗರ ಗೌಡ ಸಮಾಜದಲ್ಲಿ ಹುತ್ತರಿ ಹಬ್ಬ ಆಚರಣೆ
ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ಸಾಂಪ್ರದಾಯಿಕವಾಗಿ ಅದ್ಧೂರಿಯಾಗಿ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.