ಕುಶಾಲನಗರ ಕೊಡವ ಸಮಾಜದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ಕೊಡವ ಸಮಾಜದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ನಡೆಯಿತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಶಾಸಕ ಡಾ ಮಂತರ್ ಗೌಡ ಮಾತನಾಡಿ, ಸಮಾಜದ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಕ್ಕಳಿಗೆ ಹಿರಿಯರು ಪರಂಪರೆ ಸಂಸ್ಕೃತಿ ಬಗ್ಗೆ ತಿಳಿ ಹೇಳಬೇಕು ಎಂದು ಹೇಳಿದರು. ಸಮಾಜದ ಅಭಿವೃದ್ಧಿಗೆ ಸರ್ಕಾರದ ಮೂಲಕ 20 ಲಕ್ಷ ರು. ಅನುದಾನ ಕೊಡಿಸುವ ಬಗ್ಗೆ ಭರವಸೆ ವ್ಯಕ್ತಪಡಿಸಿದರು. ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಕಾಳಿಮಾಡ ಎಂ ಮೋಟಯ್ಯ ಮಾತನಾಡಿ, ಜನಾಂಗದ ಆಚಾರ ವಿಚಾರಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ತಮ್ಮ ಮಕ್ಕಳಿಗೆ ಆ ಬಗ್ಗೆ ಅರಿವು ಮೂಡಿಸಬೇಕು. ಯಾವುದೇ ಸಂದರ್ಭ ಮಕ್ಕಳಿಗೆ ತಪ್ಪು ಮಾಹಿತಿ ನೀಡದಂತೆ ಎಚ್ಚರ ವಹಿಸಬೇಕು ಎಂದರು. ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುಂಡ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಕ್ಕಳಿಗೆ ನೃತ್ಯ ಮತ್ತಿತರ ಸಾಂಸ್ಕೃತಿಕ, ಮನರಂಜನೆ ಚಟುವಟಿಕೆಗಳು ನಡೆದವು. ಹೆಚ್ಚಿನ ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಧ್ಯಕ್ಷ ವಾಂಚೀರ ಮನು ನಂಜುಂಡ ಮಾತನಾಡಿ, ಸಮಾಜದಲ್ಲಿ ಉತ್ತಮ ಚಟುವಟಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಈ ನಿಟ್ಟಿನಲ್ಲಿ ಒಗ್ಗಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕಾಗಿದೆ ಎಂದರು. ಸಮಾಜದ ಉಪಾಧ್ಯಕ್ಷರಾದ ಪುಲಿಯಂಡ ಚಂಗಪ್ಪ, ಕಾರ್ಯದರ್ಶಿ ಆಯಿಲಪಂಡ ಸಂಜು ಬೆಳ್ಳಿಯಪ್ಪ ಮತ್ತಿತರರಿದ್ದರು.