ಕುಶಾಲನಗರ: ಯುವ ಸೌರಭ ಕಾರ್ಯಕ್ರಮಕ್ಕೆ ಚಾಲನೆ

| Published : Nov 03 2025, 03:03 AM IST

ಕುಶಾಲನಗರ: ಯುವ ಸೌರಭ ಕಾರ್ಯಕ್ರಮಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಶಾಲನಗರ ಸಮೀಪ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯುವ ಸೌರಭ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯುವ ಸೌರಭ ಕಾರ್ಯಕ್ರಮ ನಡೆಯಿತು. ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ ಪಿ ಶಶಿಧರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭ ಮಾತನಾಡಿದ ಅವರು ಹಿರಿಯ ಕಲಾವಿದರ ಮೂಲಕ ಯುವ ಪೀಳಿಗೆಗೆ ಜನಪದ ಸಂಸ್ಕೃತಿ ಪರಿಚಯ ಮಾಡುವ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ ಎಂದರು. ಇಲಾಖೆ ಮೂಲಕ ಮಕ್ಕಳ ಪ್ರತಿಭೆಗಳನ್ನು ಹೊರಹಾಕಲು ವೇದಿಕೆ ಸೃಷ್ಟಿಯಾಗಬೇಕಿದೆ. ಆ ಮೂಲಕ ಜಾನಪದ ಇತಿಹಾಸ ಪರಂಪರೆಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಸಾಧ್ಯ ಎಂದರು.ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಎಸ್ ನಾಗೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಪಟ್ಟು ಮಾದಪ್ಪ, ಉಮಾ, ನಾರಾಯಣ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ್ ಮತ್ತಿತರರು ಇದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಗಮ ಸಂಗೀತ ಜಾನಪದ ಗೀತೆಗಳು ನೃತ್ಯ ಡೊಳ್ಳು ಕುಣಿತ ಮತ್ತು ನಾಟಕ ಕಾರ್ಯಕ್ರಮಗಳು ಜರುಗಿದವು.ಸಮಾರೋಪ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರ ಡಾ ಮಂತರ್ ಗೌಡ ಅವರು ಪಾಲ್ಗೊಂಡು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ತಂಡಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.