ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಮಾಘ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭವಾರ್ತೆ ಕುಶಾಲನಗರ

ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಮಾಘ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮ ನಡೆಯಿತು. ಕಾವೇರಿ ಪ್ರತಿಮೆಗೆ ಹಾಲು, ತುಪ್ಪ, ಜೇನು, ಎಳನೀರು, ಅರಿಸಿನ, ಕುಂಕುಮಗಳಿಂದ ಅಭಿಷೇಕ ಮಾಡಲಾಯಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಅಭಿಷೇಕ ಹಾರ್ದಿಕ ನಡೆಯಿತು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಾರವಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ಚಂದ್ರು ರುದ್ರ ಮತ್ತಿತರರು ಇದ್ದರು.