ಸಾರಾಂಶ
ಕುಶಾಲನಗರ ಸವಿತಾ ಸಮಾಜದ ನೂತನ ಕಟ್ಟಡದ ಮೊದಲನೇ ವಾರ್ಷಿಕೋತ್ಸವ ಹಾಗೂ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ ಹಾರಂಗಿ ರಸ್ತೆಯ ಸಂಘದ ಕಟ್ಟಡದ ಆವರಣದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಸವಿತಾ ಸಮಾಜದ ನೂತನ ಕಟ್ಟಡದ ಮೊದಲನೇ ವಾರ್ಷಿಕೋತ್ಸವ ಹಾಗೂ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ ಹಾರಂಗಿ ರಸ್ತೆಯ ಸಂಘದ ಕಟ್ಟಡದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್.ದೊರೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಘಟನೆಗೆ ಮೂಲಕ ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಬೇಕಿದೆ. ಕುಶಾಲನಗರ ಸಮಾಜದಿಂದ ಹಮ್ಮಿಕೊಂಡ ರಕ್ತದಾನ ಶಿಬಿರ ಮಾದರಿ ಕಾರ್ಯಕ್ರಮವಾಗಿದೆ. ಸಮಾಜದ ಕಾರ್ಯಕ್ರಮಗಳಲ್ಲಿ ಇದೊಂದು ದಾಖಲೆ. ಇದೇ ರೀತಿ ಹೆಚ್ಚಿನ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದರು.
ಸಂಘದ ಅಧ್ಯಕ್ಷ ಜಗದೀಶ್ ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಬೆಳೆದು ಬಂದ ಹಾದಿ, ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ವಹಿಸಿದ ಶ್ರಮದ ಬಗ್ಗೆ ವಿವರಿಸಿದರು.ಸಮಾಜದ ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಟಿ.ಮಧು, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಶಿವಣ್ಣ, ವಿರಾಜಪೇಟೆ ತಾಲೂಕು ಅಧ್ಯಕ್ಷ ಲವಕುಮಾರ್ ಅತಿಥಿಗಳಾಗಿ ಉಪಸ್ಥಿತರಿದ್ದರು.ಶಿಬಿರದಲ್ಲಿ 45 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ನೇತ್ರ ತಪಾಸಣೆ ನಡೆಸಿ. ಜಿಲ್ಲಾ ರಕ್ತನಿಧಿ ಕೇಂದ್ರದ ಡಾ.ಕರುಂಬಯ್ಯ, ನೇತ್ರ ತಜ್ಞ ಡಾ.ಪ್ರಶಾಂತ್ ಹಾಗೂ ಸಿಬ್ಬಂದಿಗಳು ಆರೋಗ್ಯ ಶಿಬಿರ ನಡೆಸಿಕೊಟ್ಟರು.ವಾರ್ಷಿಕೋತ್ಸವ ಅಂಗವಾಗಿ ನಡೆದ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾಂಗ್ರೆಸ್ ಕಾರ್ಮಿಕ ಘಟಕದ ನಗರ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಸಂಘದ ಖಜಾಂಚಿ ಜಿ.ಶಿವಕುಮಾರ್ ಹಾಗೂ ನೂತನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಶ್ರಮಿಸಿದ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಸಂಘದ ಗೌರವಾಧ್ಯಕ್ಷ ಬಿ.ಟಿ.ಸತ್ಯಾನಂದ, ಉಪಾಧ್ಯಕ್ಷ ಎಂ.ಸಿ.ದೊರೆಸ್ವಾಮಿ, ಕಾರ್ಯದರ್ಶಿ ಎಂ.ಎಸ್.ರವೀಂದ್ರ, ಖಜಾಂಚಿ ಜಿ.ಶಿವಕುಮಾರ್, ನಿರ್ದೇಶಕರಾದ ಹೆಚ್.ಟಿ.ಜಯಂತ್ ಕುಮಾರ್, ಕೆ.ಪಿ.ಶಂಕರ, ಆರ್.ರಾಚಪ್ಪ, ಹೆಚ್.ಎಂ.ಅರ್ಜುನ, ಬಿ.ಆರ್.ಮಲ್ಲೇಶ್, ಬಿ.ಜಿ.ತೇಜ, ಕೆ.ಎಸ್.ನವೀನ್ ಇದ್ದರು.