ಕುಶಾಲನಗರ: ಕ್ರೀಡೋತ್ಸವಕ್ಕೆ ಚಾಲನೆ

| Published : Apr 25 2025, 11:46 PM IST

ಸಾರಾಂಶ

ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ, ಒಕ್ಕಲಿಗರ ಯುವ ವೇದಿಕೆ, ಕುಶಾಲನಗರ ತಾಲೂಕು ಹಾಗೂ ಒಕ್ಕಲಿಗರ ರಿಕ್ರಿಯೇಶನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಆಯೋಜಿಸಲಾದ ಕ್ರೀಡೋತ್ಸವಕ್ಕೆ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ, ಒಕ್ಕಲಿಗರ ಯುವ ವೇದಿಕೆ, ಕುಶಾಲನಗರ ತಾಲೂಕು ಹಾಗೂ ಒಕ್ಕಲಿಗರ ರಿಕ್ರಿಯೇಶನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಆಯೋಜಿಸಲಾದ ಕ್ರೀಡೋತ್ಸವಕ್ಕೆ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಿದರು.

ಶುಕ್ರವಾರ ಕ್ರಿಕೆಟ್ ಪಂದ್ಯಾಟ ನಡೆಯಿತು. ಜಿಲ್ಲೆಯಿಂದ ಸುಮಾರು 10 ತಂಡಗಳು ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಂಡಿವೆ.ಭಾನುವಾರ ಪುರುಷರ ವಾಲಿಬಾಲ್, ಮಹಿಳೆಯರ ಥ್ರೋಬಾಲ್, ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ ಜಗ್ಗಾಟ, ಮಹಿಳೆಯರಿಗೆ ಮತ್ತು ಪುರುಷರಿಗೆ ಶಾಟ್‌ಪುಟ್‌, ವಯಸ್ಕರಿಗೆ ಹಾಗೂ ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ಕೃಷ್ಣಪ್ಪ ತಿಳಿಸಿದರು.

ಈ ಸಂದರ್ಭ ಸ್ಥಳೀಯ ಉದ್ಯಮಿಗಳಾದ ನಾಗೇಶ್ ಎಂ.ಕೆ., ಮಂಜುನಾಥ್, ಕಿಕ್ ಬಾಕ್ಸಿಂಗ್ ಚಾಂಪಿಯನ್ ಅಮಿತ್, ಜಯ ರಾಜ್, ಪ್ರೊ. ಕಬಡ್ಡಿ ಆಟಗಾರ ಅವಿನಾಶ್, ಎಂ.ಎಚ್. ಕಿರಣ್, ಚಂದ್ರಶೇಖರ್ ಹೇರೂರು ಮತ್ತಿತರರು ಇದ್ದರು.