ಸಾರಾಂಶ
ರಥದಲ್ಲಿ ದೇವರಿಗೆ ಪೂಜೆ ಸಲ್ಲಿಸುವ ಸಂದರ್ಭ ಸರದಿ ಸಾಲಿನಲ್ಲಿ ಬಂದು ಪೂಜೆ ಮಾಡಿಸುವುದು, ರಥೋತ್ಸವದ ಅಂಗವಾಗಿ ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಅನ್ನಸಂತರ್ಪಣೆ ನಡೆಯಲಿದೆ. ಕುಶಾಲನಗರ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ನ.19ರ ತನಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಶ್ರೀ ಗಣಪತಿ ರಥೋತ್ಸವ ನ.8ರಂದು ನಡೆಯಲಿದೆ. ಗಣಪತಿ ದೇವಸ್ಥಾನ ವಾರ್ಷಿಕೋತ್ಸವ ಅಂಗವಾಗಿ ಕಾರ್ತಿಕ ಮಾಸ ಬಹುಳ ಚತುರ್ಥಿಯಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ದೇವರನ್ನು ರಥದಲ್ಲಿ ಕೂರಿಸಿ ಪೂಜೆ, ಮಹಾಮಂಗಳಾರತಿ ನೆರವೇರಿಸಲಾಗುವುದು. ನಂತರ ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕುಶಾಲನಗರ ಶ್ರೀ ಗಣಪತಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಎಂ.ಕೆ. ದಿನೇಶ್ ತಿಳಿಸಿದ್ದಾರೆ.
ರಥದಲ್ಲಿ ದೇವರಿಗೆ ಪೂಜೆ ಸಲ್ಲಿಸುವ ಸಂದರ್ಭ ಸರದಿ ಸಾಲಿನಲ್ಲಿ ಬಂದು ಪೂಜೆ ಮಾಡಿಸುವುದು, ರಥೋತ್ಸವದ ಅಂಗವಾಗಿ ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಅನ್ನಸಂತರ್ಪಣೆ ನಡೆಯಲಿದೆ. ಕುಶಾಲನಗರ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ನ.19ರ ತನಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಜಾತ್ರಾ ಮೈದಾನದಲ್ಲಿ ಮನೋರಂಜನೆ ಪಾರ್ಕ್ ನ.28ರ ವರೆಗೆ ಇರಲಿದೆ. ನ.12ರಿಂದ ಜಾತ್ರಾ ಮೈದಾನದಲ್ಲಿ ಎರಡು ದಿನಗಳ ಗೋಪ್ರದರ್ಶನ ಮತ್ತು ಉತ್ತಮ ರಾಸುಗಳ ಆಯ್ಕೆ ನಡೆಯಲಿದೆ. ನ.14ರಂದು ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಜಾತ್ರಾ ಮೈದಾನದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಶ್ರಯದಲ್ಲಿ ರಥೋತ್ಸವದ ಸಂದರ್ಭ ರಥ ಬೀದಿಯಲ್ಲಿ ಕುಣಿತ ಭಜನಾ ತಂಡದಿಂದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.ದೇವಾಲಯ ವಾರ್ಷಿಕೋತ್ಸವ ಅಂಗವಾಗಿ ಶುಕ್ರವಾರ ಬೆಳಗ್ಗೆ ಧ್ವಜಾರೋಹಣ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ ನಡೆಯಿತು. ಇದೇ ಸಂದರ್ಭ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊಂದಿಗೆ ಆಗಮಿಸಿ, ಸಾಮೂಹಿಕ ಪೂಜೆ ಸಲ್ಲಿಸಿದರು.
ಈ ಸಂದರ್ಭ ದೇವಾಲಯ ಕಾರ್ಯಕಾರಿ ಮಂಡಳಿ ಗೌರವ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ಖಜಾಂಚಿ ಎಸ್.ಕೆ. ಸತೀಶ್, ಸಹ ಕಾರ್ಯದರ್ಶಿ ಕೆ.ಎಂ. ದೇವರಾಜು, ನಿರ್ದೇಶಕ ಎಚ್.ಎಂ. ಚಂದ್ರು, ಪ್ರಧಾನ ಅರ್ಚಕರಾದ ಆರ್.ಕೆ. ನಾಗೇಂದ್ರ ಬಾಬು, ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಮತ್ತಿತರರು ಇದ್ದರು.