ಕುಶಾಲನಗರ: ಗಾಲಿ ಕುರ್ಚಿ ಹಸ್ತಾಂತರ ಕಾರ್ಯಕ್ರಮ

| Published : Sep 18 2025, 01:11 AM IST

ಸಾರಾಂಶ

ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಹಿಳೆಯೊಬ್ಬರು ಗಾಲಿ ಕುರ್ಚಿಗಳನ್ನು ದಾನವಾಗಿ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಹಿಳೆಯೊಬ್ಬರು ಗಾಲಿ ಕುರ್ಚಿಗಳನ್ನು ದಾನವಾಗಿ ನೀಡಿದ್ದಾರೆ. ಕುಶಾಲನಗರ ದಂಡಿನ ಪೇಟೆ ನಿವಾಸಿ ದಿಲ್ಶಾದ್ ಬೇಗಂ ಎಂಬವರು ರೋಗಿಗಳ ಅನುಕೂಲಕ್ಕಾಗಿ ಎರಡು ಗಾಲಿ ಕುರ್ಚಿಗಳನ್ನು ವೈದ್ಯಾಧಿಕಾರಿ ಡಾ. ಮಧುಸೂದನ್ ಅವರ ಮೂಲಕ ಹಸ್ತಾಂತರ ಮಾಡಿದರು.-----------------------------------------

24 ರಂದು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ

ಮಡಿಕೇರಿ : ವಿರಾಜಪೇಟೆಯ ನಂ.434ನೇ ಮಾಜಿ ಸೈನಿಕರ ಸಹಕಾರ ಸಂಘ ನಿಯಮಿತ ವತಿಯಿಂದ ವಿರಾಜಪೇಟೆಯಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಸೆ. 24 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ.ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ, ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗು ದಿವಂಗತ ಮಾಜಿ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.ಒಲಂಪಿಯನ್ ಲೆ.ಕರ್ನಲ್ ಬಾಳೆಯಡ ಕಾಳಯ್ಯ ಸುಬ್ರಮಣಿ, ವಿರಾಜಪೇಟೆ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ತಾ. ತಹಶೀಲ್ದಾರ್ ಪ್ರವೀಣ್ ಕುಮಾರ್, ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್., ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಕಾಳಪ್ಪ, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಮಾಜಿ ಸೈನಿಕರಾದ ಪಟ್ಟಚೆರುವಂಡ ಕೆ.ನಾಚಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.