ಸಾರಾಂಶ
ನಾಡಿನ ಕಲೆ, ಸಂಸ್ಕೃತಿ, ಇತಿಹಾಸ ಸಾರುವ ಜಯ ಭಾರತ ಜನನಿಯ ತನುಜಾತೆ ನಾಡಗೀತೆ ಮತ್ತು ವಿಶ್ವಕ್ಕೆ ಅನ್ನ ಹಾಕುವ ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ ಗೀತೆಗಳು ಎಂದೆಂದಿಗೂ ಅಮರ. ಪ್ರತಿ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಗಳನ್ನು ಹಾಡಿ ಪ್ರಸ್ತುತಪಡಿಸುವ ನಿಯಮ ಜಾರಿಯಲ್ಲಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಹೊಸಗನ್ನಡ ಸಾಹಿತ್ಯವನ್ನು ಎಲ್ಲಾ ಪ್ರಕಾರಗಳಲ್ಲೂ ಶ್ರೀಮಂತಗೊಳಿಸಿ ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಚೇತನ ಕುವೆಂಪು ಎಂದು ಕಸ್ತೂರಿ ಕನ್ನಡ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಹೇಳಿದರು.ಪಟ್ಟಣದ ಶಿವಶಕ್ತಿ ಎಂಟರ್ ಪ್ರೈಸಸ್ ಬಳಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನ ಕಾರ್ಯಕ್ರಮದಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನಸಲ್ಲಿಸಿ ಮಾತನಾಡಿ, ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಥಮವಾಗಿ ಕನ್ನಡ ನಾಡಿಗೆ ತಂದುಕೊಟ್ಟ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದರು.
ನಾಡಿನ ಕಲೆ, ಸಂಸ್ಕೃತಿ, ಇತಿಹಾಸ ಸಾರುವ ಜಯ ಭಾರತ ಜನನಿಯ ತನುಜಾತೆ ನಾಡಗೀತೆ ಮತ್ತು ವಿಶ್ವಕ್ಕೆ ಅನ್ನ ಹಾಕುವ ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ ಗೀತೆಗಳು ಎಂದೆಂದಿಗೂ ಅಮರ. ಪ್ರತಿ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಗಳನ್ನು ಹಾಡಿ ಪ್ರಸ್ತುತಪಡಿಸುವ ನಿಯಮ ಜಾರಿಯಲ್ಲಿದೆ ಎಂದು ತಿಳಿಸಿದರು.ವೈಚಾರಿಕತೆ, ದುಂದು ವೆಚ್ಚ ಮತ್ತು ವರದಕ್ಷಿಣೆ ಪದ್ಧತಿಗಳಿಗೆ ಕಡಿವಾಣ ಹಾಕಿ ಮಂತ್ರ ಮಾಂಗಲ್ಯ ಜಾರಿಗೆ ತಂದರು. ಪ್ರಾಯೋಗಿಕವಾಗಿ ತಮ್ಮ ಮಗ ಪೂರ್ಣಚಂದ್ರ ತೇಜಸ್ವಿ ಅವರ ಮದುವೆ ಮುಖಾಂತರ ಸಾಕ್ಷಿಯಾದರು. ಏನಾದರೂ ಆಗು ಮೊದಲು ಮಾನವನಾಗು ಎಂಬ ಎಂಬ ಸಂದೇಶವನ್ನು ಸಾಹಿತ್ಯದ ಮೂಲಕ ಸಾರಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಆಲೂರು ಚೆನ್ನಪ್ಪ, ನಾರಾಯಣ ಶೆಟ್ಟಹಳ್ಳಿ, ಪ್ರಸನ್ನ ಕುಮಾರ್ , ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ತಾಲೂಕು ಪ್ರಧಾನ ಕಾರ್ಯದರ್ಶಿ ಸೋಂಪುರ ರಮೇಶ್, ಮಾಜಿ ಯೋಧ ಶ್ರೀನಿವಾಸ್, ಗೌರವಾಧ್ಯಕ್ಷ ವಿ.ಎಚ್.ಶಿವಲಿಂಗಯ್ಯ, ಎಂ.ವೀರಪ್ಪ, ವಿ.ಎಂ.ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಜವರೇಗೌಡ, ಪ್ರಭು, ಯಾಕೂಬ್ ಸೇರಿದಂತೆ ಇತರರು ಹಾಜರಿದ್ದರು.