ಚನ್ನಪಟ್ಟಣ: ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಹಾಗೂ ಕನ್ನಡ ಹೋರಾಟಗಾರ ಸಿಂ.ಲಿಂ. ನಾಗರಾಜು ಅವರ ಸಂಸ್ಮರಣೆ ಒಂದೇ ವೇದಿಕೆಯಲ್ಲಿ ಹಮ್ಮಿಕೊಂಡಿರುವುದು ಸಮಯೋಚಿತ. ಕುವೆಂಪು ವಿಶ್ವಮಾನವರಾದರೆ, ಸಿಂ.ಲಿಂ.ನಾಗರಾಜು ಸರಳ ಜೀವಿ

ಚನ್ನಪಟ್ಟಣ: ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಹಾಗೂ ಕನ್ನಡ ಹೋರಾಟಗಾರ ಸಿಂ.ಲಿಂ. ನಾಗರಾಜು ಅವರ ಸಂಸ್ಮರಣೆ ಒಂದೇ ವೇದಿಕೆಯಲ್ಲಿ ಹಮ್ಮಿಕೊಂಡಿರುವುದು ಸಮಯೋಚಿತ. ಕುವೆಂಪು ವಿಶ್ವಮಾನವರಾದರೆ, ಸಿಂ.ಲಿಂ.ನಾಗರಾಜು ಸರಳ ಜೀವಿ. ಈ ಇಬ್ಬರೂ ಅವರವರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಲಿಂಗಯ್ಯ ಹೇಳಿದರು.

ತಾಲೂಕಿನ ಸಿಂ.ಲಿಂ. ನಾಗರಾಜು ಪ್ರತಿಷ್ಠಾನ ಟ್ರಸ್ಟ್‌ನಿಂದ ಎಚ್.ಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ, ಸಿಂ.ಲಿಂ. ಸಂಸ್ಮರಣೆ ಹಾಗೂ ಸಿಂ.ಲಿಂ. ನಾಗರಾಜು ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಿಡಕ್ಕೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೆಂಗಳೂರು ದಕ್ಷಿಣ ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ, ಡಾ.ಕೂ.ಗಿ.ಗಿರಿಯಪ್ಪ ಮಾತನಾಡಿ, ಕುವೆಂಪು ಕವಿ ಕಾವ್ಯ, ವಿಶ್ವಮಾನವತೆ ಹಾಗೂ ಕುವೆಂಪು ಏರಿದ ಎತ್ತರ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು. ಹಾಗೆಯೇ ಸಿಂ.ಲಿಂ.ನಾಗರಾಜು ಸೇವಾ ರತ್ನ ಪ್ರಶಸ್ತಿಗೆ ಪಾತ್ರರಾದ ಶಿಕ್ಷಕ ದಂಪತಿ ಪ್ರೇಮಾ- ಕೃಷ್ಣ ಅವರನ್ನು ಅಭಿನಂದಿಸಿದರು.

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ಟ್ರಸ್ಟ್ ಸಂಚಾಲಕ ಆದರ್ಶ ಕುಮಾರ್ ಸಿಂ.ಲಿಂ.ನಾಗರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ಸುಧೀಂದ್ರ, ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಎಸ್.ರಾಮಣ್ಣ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ನಾಗವಾರ ಎನ್.ಎಂ. ಶಂಭೂಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕ ದಂಪತಿ ಪ್ರೇಮಾ- ಕೃಷ್ಣ ಅವರಿಗೆ ಸಿಂ.ಲಿಂ.ನಾಗರಾಜು ಸೇವಾ ರತ್ನ ಪ್ರಶಸ್ತಿಯನ್ನು ಜಂಟಿಯಾಗಿ ಪ್ರದಾನ ಮಾಡಲಾಯಿತು. ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿರುಪಸಂದ್ರದ ಶ್ವೇತಾ- ಸಿದ್ದರಾಜು ಪುತ್ರಿ ಹೇಮಶ್ರೀ ಅವರಿಗೆ ನಗದು ಬಹುಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಯಿತು. ಎಚ್.ಬ್ಯಾಡರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್, ಟೈ, ಬೆಲ್ಟ್ ಹಾಗೂ ಇತರೆ ಪರಿಕರಗಳನ್ನು ವಿತರಣೆ ಮಾಡಲಾಯಿತು.

ಎಚ್. ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಮ್ಮ, ಗ್ರಾಪಂ ಸದಸ್ಯ ಮಹೇಶ್ ಬಿ, ಗ್ರಾಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಎಸ್‌ಡಿಎಂಸಿ ಅಧ್ಯಕ್ಷ ಬಿ.ಎಸ್. ಕುಮಾರ್, ಉಪಾಧ್ಯಕ್ಷೆ ಅಕ್ಷತಾ, ಸಿಂ ಲಿಂ ಟ್ರಸ್ಟ್ ಕಾರ್ಯಕಾರಿ ಮಂಡಳಿ ಸದಸ್ಯರಾದ ಹೇಮಂತ್ ಗೌಡ, ವೈ.ಎಂ.ಸತೀಶ್, ನಿರ್ಮಲಾ ಇತರರು ಇದ್ದರು.

ಪೊಟೋ೨೮ಸಿಪಿಟಿ೧:

ಚನ್ನಪಟ್ಟಣ ತಾಲೂಕಿನ ಸಿಂ.ಲಿಂ. ನಾಗರಾಜು ಪ್ರತಿಷ್ಠಾನ ಎಚ್.ಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ, ಸಿಂ.ಲಿಂ. ಸಂಸ್ಮರಣೆ ಹಾಗೂ ಸಿಂ.ಲಿಂ.ನಾಗರಾಜು ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಕ ದಂಪತಿ ಪ್ರೇಮಾ- ಕೃಷ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.