28 ರಂದು ಕೆಯುಡಬ್ಲೂಜೆ ಜಿಲ್ಲಾಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ

| Published : Jul 25 2024, 01:20 AM IST

28 ರಂದು ಕೆಯುಡಬ್ಲೂಜೆ ಜಿಲ್ಲಾಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜು.28 ರಂದು ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜು.28 ರಂದು ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ. ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್‌ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು 31 ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು. ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ ಸೌಕರ್ಯ ಸಚಿವ ಎಂ.ಬಿ.ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರತಿಭಾ ಪುರಸ್ಕಾರ:

ವಾರ್ಷಿಕ ಪ್ರಶಸ್ತಿಯೊಟ್ಟಿಗೆ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.80ಕ್ಕೂ ಹೆಚ್ಚು ಅಂಕ ಪಡೆದ 15 ಜನ ಪತ್ರಕರ್ತರ ಮಕ್ಕಳಿಗೆ ಇದೇ ವೇಳೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.