ಸಾರಾಂಶ
KWJ membership renewal, invitation for new membership
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ನೂತನ ಸದಸ್ಯತ್ವ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ತಿಳಿಸಿದ್ದಾರೆ. ಪತ್ರಕರ್ತರ ಪ್ರಾತಿನಿಧಿಕ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ರಾಜ್ಯದ ಏಕೈಕ ಪತ್ರಕರ್ತರ ಸಂಘಟನೆ ಇದಾಗಿದ್ದು, ಪತ್ರಕರ್ತರ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಕಲಬುರಗಿಯ ಪತ್ರಿಕಾ ಭವನದಲ್ಲಿ ಅರ್ಜಿ ನೀಡಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಮಾ.8ರೊಳಗೆ ಸಲ್ಲಿಸುವಂತೆ ಅವರು ಕೋರಿದ್ದಾರೆ.