ಸಾರಾಂಶ
ಮೈಸೂರಿನ ಕೊಡಗು ಗೌಡ ಸಮಾಜದ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಕೈಲ್ ಮುಹೂರ್ತ ಕ್ರೀಡಾಕೂಟ ನಡೆಯಿತು. ಮೈಸೂರಿನ ಕೊಡಗು ಗೌಡ ಸಮಾಜ ಅಧ್ಯಕ್ಷ ಕೊಂಬಾರನ ಬಸಪ್ಪ ಕ್ರೀಡಾಕೂಟ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಬಾಂಧವರು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಮೈಸೂರಿನ ಕೊಡಗು ಗೌಡ ಸಮಾಜದ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಕೈಲ್ ಮುಹೂರ್ತ ಕ್ರೀಡಾಕೂಟ ನಡೆಯಿತು.ಮೈಸೂರಿನ ಕೊಡಗು ಗೌಡ ಸಮಾಜ ಅಧ್ಯಕ್ಷ ಕೊಂಬಾರನ ಬಸಪ್ಪ ಕ್ರೀಡಾಕೂಟ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಬಾಂಧವರು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಈ ಸಂದರ್ಭ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಸಮಾಜದ ಕಾರ್ಯದರ್ಶಿ ಪೊನ್ನೆಟಿ ನಂದ, ಖಜಾಂಚಿ ನಡುವಟ್ಟಿರ ಲಕ್ಷ್ಮಣ್, ಸಹ ಕಾರ್ಯದರ್ಶಿ ನಡುಮನೆ ಚಂಗಪ್ಪ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಕೊಂಬಾರನ ಸುಬ್ಬಯ್ಯ, ಕುಂಟುಪುಣಿ ರಮೇಶ್, ಹೊಸೂರು ರಾಘವಯ್ಯ, ಚಪ್ಪೇರ ಯಮುನಾ, ಕುಂಟುಪುಣಿ ಶೀಲಾ, ತೋಟಂಬೈಲು ಇಂದಿರಾ, ಮಾಜಿ ಸೈನಿಕರ ಸಂಘ ಅಧ್ಯಕ್ಷ ಚಂಡೀರ ಬಸಪ್ಪ, ಗೌಡ ಯುವ ವೇದಿಕೆ ಅಧ್ಯಕ್ಷ ಮೊಟ್ಟನ ಕೌಶಿಕ್, ಗೌಡ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಪೊನ್ನಚ್ಚನ ಅಪ್ಪಯ್ಯ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಸಂಘ ಅಧ್ಯಕ್ಷೆ ನಡುವಟಿರ ಗೀತಾ ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು.ಸೆ.14ರಂದು ಸಭಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ನಡೆಯಲಿದ್ದು, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.