ಸಾರಾಂಶ
ಇಟ್ಟಂಗಿ ಭಟ್ಟಿ ಕಾರ್ಮಿರನ್ನು ಅಮಾನವೀಯವಾಗಿ ಥಳಿಸಿರುವುದು ಅತ್ಯಂತ ಹೀನ ಕೃತ್ಯ. ಹಲ್ಲೆ ಮಾಡಿದ ಪುಂಡರು ಜಿಲ್ಲೆಯ ಜನತೆ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸದಸ್ಯ ಸಚಿನ ಬೊಂಬಳೆ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಇಟ್ಟಂಗಿ ಭಟ್ಟಿ ಕಾರ್ಮಿರನ್ನು ಅಮಾನವೀಯವಾಗಿ ಥಳಿಸಿರುವುದು ಅತ್ಯಂತ ಹೀನ ಕೃತ್ಯ. ಹಲ್ಲೆ ಮಾಡಿದ ಪುಂಡರು ಜಿಲ್ಲೆಯ ಜನತೆ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸದಸ್ಯ ಸಚಿನ ಬೊಂಬಳೆ ಹೇಳಿದರು.ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೊಂದ ಕಾರ್ಮಿಕರಿಗೆ ಹಣ್ಣು ವಿತರಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇಟ್ಟಿಗೆ ಭಟ್ಟಿ ಮಾಲೀಕ ಹಾಗೂ ಗುಂಡಾ ವರ್ತನೆ ತೋರಿದ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕು. ಪೆಟ್ಟು ತಿಂದವರಿಗೆ ಕಾರ್ಮಿಕ ಇಲಾಖೆಯಿಂದ ಹಾಗೂ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವುದಲ್ಲದೇ ದುಷ್ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಅಸಂಘಟಿತ ಕಾರ್ಮಿಕ ಸಹ ಸಂಚಾಲಕ ಸಂಗಮೇಶ ಉಕ್ಕಲಿ, ಸುಭಾಷ ಭಿಸೆ, ಮಂಜುಳಾ ಅಂಗಡಿ, ರವಿ ರಜಪೂತ ಉಪಸ್ಥಿತರಿದ್ದರು.