ಸಾರಾಂಶ
ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಮಂಗಳೂರಿನಲ್ಲಿ ಕಾರ್ಮಿಕರು ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ವಿಶ್ವದ ಕಾರ್ಮಿಕರೇ ಒಗ್ಗಟ್ಟಾಗಿರಿ ಎಂಬ ಕರೆ ನೀಡುವ ಕಾರ್ಮಿಕ ವರ್ಗ ಸಮಸ್ತ ಮಾನವಕುಲದ ಏಳಿಗೆಗಾಗಿ ಶ್ರಮಿಸುತ್ತಿದೆ ಎಂದು ಪ್ರಗತಿಪರ ಚಿಂತಕ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹಸಂಚಾಲಕ ಕೃಷ್ಣಪ್ಪ ಕೊಂಚಾಡಿ ಅಭಿಪ್ರಾಯಪಟ್ಟರು.ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಮಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಭೆಗೆ ಮುನ್ನ ಕಾರ್ಮಿಕರು ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.ಸಿಐಟಿಯು ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಮೇ ದಿನಾಚರಣಾ ಸಮಿತಿ ಗೌರವಾಧ್ಯಕ್ಷ ಬಿ.ಎನ್. ದೇವಾಡಿಗ ಮಾತನಾಡಿದರು.
ಮೇ ದಿನಾಚರಣಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಜ್, ಅಧ್ಯಕ್ಷ ಮಹಮ್ಮದ್ ಮುಸ್ತಾಫ, ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಂಚಾಡಿ, ಹಿರಿಯ ಕಾರ್ಮಿಕ ಮುಖಂಡರಾದ ಲೋಕಯ್ಯ, ಜಯಂತಿ ಶೆಟ್ಟಿ, ಭಾರತಿ ಬೋಳಾರ ಇದ್ದರು.