ಕಾರ್ಮಿಕ ಇಲಾಖೆ ಸವಲತ್ತು ಹಳ್ಳಿಯಲ್ಲಿರುವ ಕಾರ್ಮಿಕರಿಗೂ ಸಿಗಬೇಕು

| Published : Sep 04 2025, 01:00 AM IST

ಕಾರ್ಮಿಕ ಇಲಾಖೆ ಸವಲತ್ತು ಹಳ್ಳಿಯಲ್ಲಿರುವ ಕಾರ್ಮಿಕರಿಗೂ ಸಿಗಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಮಿಕ ಇಲಾಖೆಯೂ ಕಾರ್ಮಿಕರ ಒಳಿತಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ವೃತ್ತಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಒಳಿತಿಗಾಗಿ ಇಂತಹ ಸವಲತ್ತುಗಳನ್ನು ಉಚಿತವಾಗಿ ಒದಗಿಸುತ್ತಿದ್ದು, ಇದರ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು, ನೆಮ್ಮದಿಯ ಜೀವನ ರೂಪಿಸಿಕೊಳ್ಳಲು ಸಲಹೆ ನೀಡಿದರು. ಕಟ್ಟಡ ಕಾರ್ಮಿಕರಿಗೆ ೭೦ ಕಿಟ್ ವಿತರಣೆ ಮಾಡಲಾಗುತ್ತಿದೆ, ಇನ್ನೂ ಹೆಚ್ಚಿನ ಅಗತ್ಯವಿದ್ದರೆ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತೆ ಹಾಗೂ ಆಚಾರ್‌ ಮತ್ತು ಎಲೆಕ್ಟ್ರೀಷಿಯನ್ ಅವರಿಗೆ ಇನ್ನೊಂದು ದಿನ ಕೊಡಲಾಗುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಸವಲತ್ತುಗಳು ಗ್ರಾಮೀಣ ಪ್ರದೇಶದಲ್ಲಿನ ಕೂಲಿ ಕಾರ್ಮಿಕರಿಗೂ ದೊರೆಯಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತ, ತಾ.ಪಂ., ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರಿಗೆ ನೀಡಲಾಗಿರುವ ವಿವಿಧ ಸಲಕರಣಾ ಕಿಟ್‌ಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯಿತಿ ಅಧಿಕಾರಿಗಳ ಜತೆ ಚರ್ಚಿಸಿ, ಅಗತ್ಯ ವ್ಯವಸ್ಥೆ ಮಾಡಿಕೊಂಡು ನೋಂದಣಿ ಕಾರ್ಯ ಪ್ರಾರಂಭಿಸಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ದೊರೆಯುವ ಆರೋಗ್ಯ ಮತ್ತು ವಿಮಾ ಸೌಲಭ್ಯವೂ ತಾಲೂಕಿನ ಪ್ರತಿಯೊಬ್ಬ ಕೂಲಿ ಕಾರ್ಮಿಕರಿಗೂ ದೊರೆಯುವಂತೆ ಹೆಚ್ಚಿನ ಕಾಳಜಿ ವಹಿಸುವಂತೆ ಕಾರ್ಮಿಕ ನಿರೀಕ್ಷಕಿ ಎ.ಎಸ್.ಯಮುನಾ ಅವರಿಗೆ ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು.

ಕಾರ್ಮಿಕ ಇಲಾಖೆಯೂ ಕಾರ್ಮಿಕರ ಒಳಿತಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ವೃತ್ತಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಒಳಿತಿಗಾಗಿ ಇಂತಹ ಸವಲತ್ತುಗಳನ್ನು ಉಚಿತವಾಗಿ ಒದಗಿಸುತ್ತಿದ್ದು, ಇದರ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು, ನೆಮ್ಮದಿಯ ಜೀವನ ರೂಪಿಸಿಕೊಳ್ಳಲು ಸಲಹೆ ನೀಡಿದರು. ಕಟ್ಟಡ ಕಾರ್ಮಿಕರಿಗೆ ೭೦ ಕಿಟ್ ವಿತರಣೆ ಮಾಡಲಾಗುತ್ತಿದೆ, ಇನ್ನೂ ಹೆಚ್ಚಿನ ಅಗತ್ಯವಿದ್ದರೆ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತೆ ಹಾಗೂ ಆಚಾರ್‌ ಮತ್ತು ಎಲೆಕ್ಟ್ರೀಷಿಯನ್ ಅವರಿಗೆ ಇನ್ನೊಂದು ದಿನ ಕೊಡಲಾಗುತ್ತದೆ ಎಂದರು.

ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಉಪ ಪ್ರಾಂಶುಪಾಲ ಕಾಳೇಗೌಡ, ಅರಕಲಗೂಡು ತಾಲೂಕು ಕಾರ್ಮಿಕ ನಿರೀಕ್ಷಕ ರಘು, ಕಾರ್ಮಿಕ ಇಲಾಖೆಯ ಸಹಾಯಕ ಚಿದಾನಂದ, ಡಾ. ಅಂಬೇಡ್ಕರ್‌ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಕೃಷ್ಣ, ಇತರರು ಇದ್ದರು.

ಸಾರ್ವಜನಿಕರ ಆಕ್ರೋಶ:

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಟ್ಟಡ ಕಾರ್ಮಿಕರಿಗೆ ವಿವಿಧ ಸಲಕರಣಾ ಕಿಟ್‌ಗಳ ವಿತರಣಾ ಸಮಾರಂಭದ ಆಯೋಜನೆಯಿಂದ ವಿದ್ಯಾರ್ಥಿಗಳಿಗೆ ಏನು ಉಪಯೋಗವೆಂದು ನಾಗರಿಕರು ಆಕ್ರೋಶದಿಂದ ಪ್ರಶ್ನಿಸಿ, ಕಾರ್ಯಕ್ರಮವನ್ನು ಸಮುದಾಯ ಭವನದಲ್ಲಿ ಆಯೋಜನೆ ಮಾಡಬಹುದಿತ್ತು ಎಂದು ಸಲಹೆ ನೀಡಿದ್ದಾರೆ.