ಕಾರ್ಮಿಕ ಇಲಾಖೆ ತಪಾಸಣೆ:ಮೂವರು ಬಾಲಕಾರ್ಮಿಕರ ಪತ್ತೆ

| Published : Dec 22 2023, 01:30 AM IST

ಸಾರಾಂಶ

ಜಂಟಿ ಕಾರ್ಮಿಕ ಆಯುಕ್ತರ ಸೂಚನೆ ಮೇರೆಗೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ನಡೆಸಲಾಯಿತು. ಮೂವರು ಮಕ್ಕಳನ್ನು ರಕ್ಷಿಸಿ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು. ಮಕ್ಕಳನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಬಾಲ ಕಾರ್ಮಿಕರ ವಿರುದ್ಧ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಯಿತು.

ಹುಬ್ಬಳ್ಳಿ: ನಗರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಪರಿಶೀಲನೆ ನಡೆಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡವೂ ಮೂವರು ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಿಸಿದೆ.

ಜಂಟಿ ಕಾರ್ಮಿಕ ಆಯುಕ್ತರ ಸೂಚನೆ ಮೇರೆಗೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ನಡೆಸಲಾಯಿತು. ಮೂವರು ಮಕ್ಕಳನ್ನು ರಕ್ಷಿಸಿ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು. ಮಕ್ಕಳನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಬಾಲ ಕಾರ್ಮಿಕರ ವಿರುದ್ಧ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಯಿತು.

ಈ ವೇಳೆ ಸಂಸ್ಥೆಗಳ ಮಾಲೀಕರಿಗೆ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಕರಪತ್ರ ಹಂಚಲಾಯಿತು. ಅಂಗಡಿ ಮುಗ್ಗಟ್ಟುಗಳನ್ನು ಸ್ಟೀಕರ್‌ ಅಂಟಿಸಿ ಜಾಗೃತಿ ಮೂಡಿಸಲಾಯಿತು.

18 ವರ್ಷದೊಳಗಿನ ಮಕ್ಕಳು ಕೆಲಸ ನಿರ್ವಹಿಸುವುದು ಕಂಡು ಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಇಲ್ಲಿ ಕರೆ ಮಾಡುವಂತೆ ತಿಳಿಸಲಾಯಿತು.

ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಲಲಿತಾ ಸಾತೇನಹಳ್ಳಿ, ಮಾರಿಕಾಂಬಾ ಹುಲಕೋಟಿ, ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ, ಅಕ್ರಮ ಅಲ್ಲಾಪುರ, ರಜನಿ ಹಿರೇಮಠ, ಸಂಗೀತಾ ಬೆನಕನಕೊಪ್ಪ, ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ, ಸುನಿತಾ ಮುರಗೋಡ, ಮಕ್ಕಳ ಸಹಾಯವಾಣಿ ಸಿಬ್ಬಂದಿ, ಪೊಲೀಸ್‌ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.