ಸಾರಾಂಶ
ಯಾವುದೇ ದೇಶ ಎಲ್ಲಾ ರಂಗದಲ್ಲಿಯೂ ಅಭಿವೃದ್ದಿಯಾಗಬೇಕಾದರೆ ಅದರಲ್ಲಿ ಶ್ರಮಿಕರ ವರ್ಗ ಕಾರ್ಮಿಕರ ಪಾತ್ರ ಮುಖ್ಯ ಪಾತ್ರವಹಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.
ಬಂಗಾರಪೇಟೆ: ಯಾವುದೇ ದೇಶ ಎಲ್ಲಾ ರಂಗದಲ್ಲಿಯೂ ಅಭಿವೃದ್ದಿಯಾಗಬೇಕಾದರೆ ಅದರಲ್ಲಿ ಶ್ರಮಿಕರ ವರ್ಗ ಕಾರ್ಮಿಕರ ಪಾತ್ರ ಮುಖ್ಯ ಪಾತ್ರವಹಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದ ಶ್ರೀವಿನಾಯಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾರ್ಮಿಕರನ್ನು ದೇಶದ ಪ್ರಬಲ ಶಕ್ತಿ ಎಂದರೂ ತಪ್ಪಾಗಲಿಕ್ಕಿಲ್ಲ, ದೇಶದ ಅಭಿವೃದ್ದಿಯಲ್ಲಿ ಇವರ ಪಾತ್ರ ಬಹಳ ಮಹತ್ವದ್ದು ಎಂದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಮಾತನಾಡಿ, ಸಮಾಜ ಮತ್ತು ದೇಶದ ಅಭಿವೃದ್ದಿಯಲ್ಲಿ ಕಾರ್ಮಿಕರು ಮತ್ತು ಕಾರ್ಮಿಕ ವರ್ಗದ ಕೊಡುಗೆಳನ್ನು ಗುರುತಿಸಿ ಗೌರವಿಸುವ ಮಹತ್ವವನ್ನು ಅಂತಾರಾಷ್ಟ್ರೀಯ ಕಾರ್ಮಿಕ ದಿನ ಒತ್ತಿ ಹೇಳುತ್ತದೆ, ದೇಶದ ಬೆನ್ನಲುಗಳು ಕಾರ್ಮಿಕರು,ರೈತರು ಮಾತ್ರ, ಕಾರ್ಮಿಕರು ತಮ್ಮ ಹಕ್ಕುಗಳ ಬಗ್ಗೆ ಹೇಳಬೇಕು ಎಂದರು, ಕಾರ್ಮಿಕ ಸಂಘದ ಅಧ್ಯಕ್ಷ ಮಣಿ,ಪ್ರಧಾನ ಕಾರ್ಯದರ್ಶಿ ಚಿನ್ನಿ,ಪ್ರಕಾಶ್,ಕಾರ್ತಿಕ್,ತರುಣ್ ರಮೇಶ್‌ಗೌಡ ಇದ್ದರು.