ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಎಲ್ಲ ಕೂಲಿಕಾರರು ಫಾರಂ ನಂ. 6 ಸಲ್ಲಿಸುವ ಮೂಲಕ ಕೂಲಿ ಕೆಲಸಕ್ಕೆ ಹಾಜರಾಗುವಂತೆ ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ ಕರೆ ನೀಡಿದರು.

ಕೊಪ್ಪಳ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಎಲ್ಲ ಕೂಲಿಕಾರರು ಫಾರಂ ನಂ. 6 ಸಲ್ಲಿಸುವ ಮೂಲಕ ಕೂಲಿ ಕೆಲಸಕ್ಕೆ ಹಾಜರಾಗುವಂತೆ ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ ಕರೆ ನೀಡಿದರು.

ತಾಲೂಕಿನ ಕಲಕೇರಿ ಗ್ರಾಮದ ಸಂತ ಷರೀಪರ ದೇವಸ್ಥಾನದ ಆವರಣದಲ್ಲಿ ಜರುಗಿದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಐಇಸಿ ಕಾರ್ಯಕ್ರಮದಡಿ ರೋಜಗಾರ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿ ಮಾನವ ದಿನಕ್ಕೆ ₹370 ಕೂಲಿ ನಿಗದಿಪಡಿಸಿದ್ದು, ಸಂಪೂರ್ಣವಾಗಿ ಕೂಲಿ ಕೆಲಸ ನಿರ್ವಹಿಸಿ ಪೂರ್ತಿ ಹಣ ಪಡೆದುಕೊಳ್ಳಬೇಕು. ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೆಲಸದ ಜೊತೆಗೆ ಆರೋಗ್ಯ ಕಡೆ ಕಾಳಜಿವಹಿಸಬೇಕು. 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಜಾಬ್‌ಕಾರ್ಡ್‌ ಬಳಕೆ ಮಾಡಿಕೊಂಡು ಕೂಲಿ ಕೆಲಸ ಪಡೆಯಲು ಕಡ್ಡಾಯವಾಗಿ ನಮೂನೆ-6 ಸಲ್ಲಿಸಬೇಕು. ಮೇ ಮತ್ತು ಜೂನ್ ವರೆಗೆ 60 ದಿನಗಳ ಕೂಲಿ ಕೆಲಸ ಪಡೆಯಬೇಕು ಎಂದರು.

ಕೂಲಿ ಹಣದಿಂದ ಮಕ್ಕಳ ಶಾಲಾ, ಕಾಲೇಜು ಶುಲ್ಕ ಭರಿಸಲು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗೆ ಶುಲ್ಕ ಹಾಗೂ ಕುಟುಂಬ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದರು.

ಜಾಬ್‌ಕಾರ್ಡ್‌ನಲ್ಲಿರುವ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಹೊಂದಿದ ನಂತರವೇ ಎನ್‌ಎಂಆರ್ ಪ್ರಕಾರ ಕೂಲಿಕಾರರು ಕೂಲಿ ಕೆಲಸಕ್ಕೆ ಹಾಜರಾಗಬೇಕು. 1 & 2ನೇ ಹಾಜರಾತಿ ಕಡ್ಡಾಯವಾಗಿರುತ್ತದೆ ಎಂದು ಹೇಳಿದರು.

ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ, ಪ್ರತಿ ಜಾಬ ಕಾರ್ಡ್‌ಗೆ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕು. ಎಲ್ಲ ಕೂಲಿಕಾರರು ಸಾಮಾಜಿಕ ಭದ್ರತೆ ವಿಮೆಗಳಾದ ಪಿಎಂಜೆಜೆಬಿವೈ, ಪಿಎಂಎಸ್‌ಬಿವೈ.ಗಳಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಿದರು.

ಕುಮಾರ ಪರಗಿ, ಬೇರ್‌ಪೂಟ್ ಟೆಕ್ನಿಷಿಯನ್ ಮಾರುತಿ ವಾಲ್ಮೀಕಿ, ಗ್ರಾಮ ಕಾಯಕ ಮಿತ್ರ ರಾಧಾ, ಕಾಯಕ ಬಂಧುಗಳಾದ ನಾಗರಾಜ ಮಲಾಜಿ, ಮುತ್ತು ಲಮಾಣಿ, ಕುಮಾರ ಚವ್ಹಾಣ್, ರಾಮಣ್ಣ ಉಪ್ಪಾರ, ವೀರೇಶ ಹರಿಜನ, ಕೂಲಿಕಾರರಿದ್ದರು.