ಪಟ್ಟಣದ ಬಾಣಾವರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಸುತ್ತಮುತ್ತ ಗಿಡಗೆಂಟೆಗಳು ಬೆಳೆದು ನಿಂತಿದ್ದು, ಪ್ರತಿಮೆ ಆವರಣದಲ್ಲಿ ಸ್ವಚ್ಛತೆಯ ಕೊರತೆ ಎದ್ದು ಕಾಣುತ್ತಿದೆ. ಈ ಬಗ್ಗೆ ಪಟ್ಟಣ ಪಂಚಾಯಿತಿ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸೋಮವಾರಪೇಟೆ: ಪಟ್ಟಣದ ಬಾಣಾವರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಸುತ್ತಮುತ್ತ ಗಿಡಗೆಂಟೆಗಳು ಬೆಳೆದು ನಿಂತಿದ್ದು, ಪ್ರತಿಮೆ ಆವರಣದಲ್ಲಿ ಸ್ವಚ್ಛತೆಯ ಕೊರತೆ ಎದ್ದು ಕಾಣುತ್ತಿದೆ. ಈ ಬಗ್ಗೆ ಪಟ್ಟಣ ಪಂಚಾಯಿತಿ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ನಿರ್ವಹಣೆ ಪಟ್ಟಣ ಪಂಚಾಯಿತಿಯ ಜವಾಬ್ದಾರಿಯಾಗಿದ್ದು, ಕೂಡಲೇ ಅಂಬೇಡ್ಕರ್ ಪ್ರತಿಮೆ ಸುತ್ತಮುತ್ತ ಬೆಳೆದಿರುವ ಗಿಡಗೆಂಟೆಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಕೂಡಲೇ ಸ್ವಚ್ಛತಾ ಕಾರ್ಯ ನಡೆಸಲು ಪಪಂ ಆಡಳಿತ ಮುಂದಾಗದಿದ್ದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಮತ್ತು ಪಪಂ ಆಡಳಿತ ವಿರುದ್ಧ ತಾಲೂಕು ಕಚೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು ಎಚ್ಚರಿಕೆ ನೀಡಿದ್ದಾರೆ.