ಉತ್ತರ ಕರ್ನಾಟಕ ಭಾಗದಲ್ಲಿ ತಜ್ಞ ವೈದ್ಯರ ಕೊರತೆ -ಸಂಸದ ಬೊಮ್ಮಾಯಿ

| Published : Sep 23 2025, 01:04 AM IST

ಉತ್ತರ ಕರ್ನಾಟಕ ಭಾಗದಲ್ಲಿ ತಜ್ಞ ವೈದ್ಯರ ಕೊರತೆ -ಸಂಸದ ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿ ವೈದ್ಯರ ಸಂಖ್ಯೆ ಕಡಿಮೆ ಇದೆ. ಹಾಸಿಗೆ ಮತ್ತು ರೋಗಿಗಳ ಅನುಪಾತದಲ್ಲಿಯೂ ಸಾಕಷ್ಟು ವ್ಯತ್ಯಾಸ ಇದೆ. ಈ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಗಮನ ಹರಿಸಬೇಕಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ: ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿ ವೈದ್ಯರ ಸಂಖ್ಯೆ ಕಡಿಮೆ ಇದೆ. ಹಾಸಿಗೆ ಮತ್ತು ರೋಗಿಗಳ ಅನುಪಾತದಲ್ಲಿಯೂ ಸಾಕಷ್ಟು ವ್ಯತ್ಯಾಸ ಇದೆ. ಈ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಗಮನ ಹರಿಸಬೇಕಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ತಾಲೂಕಿನ ಗುತ್ತಲ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿರವರ 75ನೇ ಹುಟ್ಟುಹಬ್ಬದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಹಾವೇರಿ ಆಶ್ರಯದಲ್ಲಿ ಏರ್ಪಡಿಸಿದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮುದಾಯದ ಆರೋಗ್ಯ ಬಹಳ ಮುಖ್ಯ. ಆರೋಗ್ಯದಲ್ಲಿ ಹಲವಾರು ಪ್ರಕಾರ ಇದೆ. ಒಂದು ವ್ಯಕ್ತಿಯ ಆರೊಗ್ಯ, ಸಮುದಾಯದ ಆರೋಗ್ಯ ರಾಜ್ಯ ಮತ್ತು ದೇಶದ ಆರೋಗ್ಯ. ವ್ಯಕ್ತಿಯ ಆರೋಗ್ಯ ಚೆನ್ನಾಗಿದ್ದರೆ ಕುಟುಂಬದ ಆರೋಗ್ಯ, ಸಮುದಾಯ ಆರೋಗ್ಯ, ರಾಜ್ಯ, ದೇಶದ ಆರೋಗ್ಯ ಚೆನ್ನಾಗಿರುತ್ತದೆ. ವ್ಯಕ್ತಿಯಿಂದ ದೇಶದ ಆರೋಗ್ಯ ಕಾಪಾಡುವುದು ಎಲ್ಲರ ಕರ್ತವ್ಯ ಎಂದರು.ತಜ್ಞ ವೈದ್ಯರ ಕೊರತೆ: ಆರೋಗ್ಯ ಇಲಾಖೆ ಸಮುದಾಯ ಆರೋಗ್ಯ ತಪಾಸಣೆ ಮಾಡುವ ಮೂಲಕ ಆರೊಗ್ಯ ಕಾಪಾಡುತ್ತದೆ. ಆರೋಗ್ಯ ಇಲಾಖೆಗೆ ಮಹತ್ವ ಸಿಗುತ್ತಿಲ್ಲ. ಗುತ್ತಲದಲ್ಲಿ ಎಲ್ಲ ವೈದ್ಯರು ಇಲ್ಲ, ಸಕ್ಕರೆ, ಕ್ಯಾನ್ಸರ್, ತಪಾಸಣೆ ಇಟ್ಟುಕೊಂಡಿದ್ದಾರೆ, ಇಲ್ಲಿ ಕನಿಷ್ಠ ತಜ್ಞ ವೈದ್ಯರ ಅಗತ್ಯ ಇದೆ. ಜಿಲ್ಲಾ ಆಸ್ಪತ್ರೆಗೂ ತಜ್ಞ ವೈದ್ಯರ ಕೊರತೆ ಇದೆ. ಮೆಡಿಕಲ್ ಕಾಲೇಜು ಆರಂಭವಾಗಿ ನಾಲ್ಕು ವರ್ಷ ಆದರೂ ತಜ್ಞ ವೈದ್ಯರು ಹಾಗೂ ಸ್ನಾತಕೋತ್ತರ ಕಲಿಯುವ ವಿದ್ಯಾರ್ಥಿಗಳಿಗೆ ಪಾಠ ಮಾಡುವವರು ಇಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಪ್ರಧಾನಮಂತ್ರಿ ಮೋದಿಯವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಹದಿನೈದು ದಿನ. ಆರೋಗ್ಯ ತಪಾಸಣೆ ಮಾಡಲು ಸ್ವಸ್ತ ನಾರಿ ಸಶಕ್ತ ಪರಿವಾರ ಕಾರ್ಯಕ್ರಮ ಮಾಡಿದ್ದಾರೆ. ಇದರ ಲಾಭ ಗುತ್ತಲ ಸುತ್ತಮುತ್ತ ಗ್ರಾಮದ ಜನರು ಪಡೆಯಬೇಕು ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಡಿಎಚ್‌ಒ ಡಾ. ಎಂ. ಜಯಾನಂದ, ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರಭಾಕರ ಕುಂದೂರ, ಮುಖಂಡರಾದ ಸಿ.ಬಿ. ಕುರುವತ್ತಿಗೌಡ್ರ, ಶಿವಪ್ಪ ತೋಟದ, ಪಪಂ ಅಧ್ಯಕ್ಷೆ ಮಾಳವ್ವ ಗೊರವರ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಇದ್ದರು. ಉತ್ತರ ಕರ್ನಾಟಕದಲ್ಲಿ ಸುಮಾರು ಒಂದು ಸಾವಿರ ರೋಗಿಗಳಿಗೆ ಒಬ್ಬ ವೈದ್ಯ ಇದ್ದಾರೆ. ದಕ್ಷಿಣದಲ್ಲಿ 250 ರೋಗಿಗೆ ಒಬ್ಬ ವೈದ್ಯರಿದ್ದಾರೆ. ಈ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಗಮನ ಹರಿಸಬೇಕಿದೆ. ನಾನು ಸಿಎಂ ಆಗಿದ್ದಾಗ 750 ಪಿಎಚ್‌ಸಿ ಕೇಂದ್ರಗಳ ಮೇಲ್ದರ್ಜೆಗೆ ಹಣ ಕೊಟ್ಟಿದ್ದೆ, ಅದು ನಿರಂತರ ಮುಂದುವರೆಯಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.