ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಕನ್ನಡಿಗರ ಮೇಲೆ ಬೆಳಗಾವಿಯ ಎಂಇಎಸ್ ಗೂಂಡಾಗಳು ಹಲ್ಲೆ ಮಾಡುವುದನ್ನು ಖಂಡಿಸಿ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಶನಿವಾರ ಹಾಸನದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.ಜಿಲ್ಲಾ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದಿಂದ ಬೆಂಬಲಿಸಿ ಜಿಲ್ಲಾಡಳಿತಕ್ಕೆ ಮನವಿ ಕೊಟ್ಟಿರುವುದು ಬಿಟ್ಟರೆ ಯಾವುದೇ ಅಂಗಡಿ ಮುಂಗಟ್ಟನ್ನು ಯಾರೂ ಮುಚ್ಚಲಿಲ್ಲ. ಎಂದಿನಂತೆ ವಾಹನಗಳು ಸಂಚರಿಸಿದವು. ಭಾಷೆಯ ಬಗ್ಗೆ ನಡೆದ ವಾಗ್ವಾದದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆಯ ನಂತರ ಮಾರ್ಚ್ ೨೨ ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಮಹಾರಾಷ್ಟ್ರದ ಗಡಿಯಲ್ಲಿರುವ ಜಿಲ್ಲೆಯಾದ ಬೆಳಗಾವಿಯ ಹೊರವಲಯದಲ್ಲಿ ಈ ವಾಗ್ವಾದ ನಡೆದಿರುವುದನ್ನು ಖಂಡಿಸಲಾಗಿತ್ತು. ಅಂದು ವಾಟಾಳ್ ನಾಗರಾಜು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ತದನಂತರ ಈ ಬಗ್ಗೆ ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳದ ಕಾರಣ ಬಂದ್ ಯಶಸ್ವಿಯಾಗಿರುವುದಿಲ್ಲ. ಕೆ.ಎಸ್.ಆರ್.ಟಿ.ಸಿ. ಬಸ್, ಖಾಸಗೀ ಬಸ್, ಆಟೋ, ಕಾರು ಸೇರಿದಂತೆ ಎಲ್ಲಾ ವಾಹನಗಳು ಎಂದಿನಂತೆ ಸಂಚರಿಸಿದವು. ಇನ್ನು ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಯಾವ ಕಚೇರಿಗಳು ಬಾಗಿಲು ಹಾಕಲಿಲ್ಲ. ಆದರೇ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.