ಕೆರೆ ಒತ್ತುವರಿ ಹುನ್ನಾರ: ಕರವೇ ಪ್ರತಿಭಟನೆ

| Published : Dec 19 2024, 12:32 AM IST

ಕೆರೆ ಒತ್ತುವರಿ ಹುನ್ನಾರ: ಕರವೇ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ನಗರ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ಹಲವು ಹೊಸ ಬಡಾವಣೆಗಳು ನಿರ್ಮಾಣಗೊಂಡಿದ್ದು, ರಸ್ತೆ ನಿರ್ಮಾಣಕ್ಕಾಗಿ ಕೆಲವೆಡೆ ಕೆರೆಯನ್ನು ಒತ್ತುವರಿ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಶೆಟ್ಟಿ ಬಣದ ನೇತೃತ್ವದಲ್ಲಿ ಬುಧವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು, ಕೆರೆ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಕೆಲವರ ಲಾಭಕೋರತನದಿಂದಾಗಿ ಪರಿಸರಕ್ಕೆ ಹಾನಿಯಾಗುವ ಕೃತ್ಯಗಳು ನಡೆಯುತ್ತಿವೆ. ಇದು ಖಂಡನೀಯ ನಡೆಯಾಗಿದೆ. ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡುತ್ತಿದ್ದು, ಅಕ್ರಮ ರಸ್ತೆ ತೆರವು ಮಾಡುವಂತೆ ಒತ್ತಾಯಿಸುವುದಾಗಿ ತಿಳಿಸಿದರು.

ಕೆರೆಯನ್ನ ರಕ್ಷಣೆ ಮಾಡಬೇಕಾದ ಕಂದಾಯ ಇಲಾಖೆಯ ಅಧಿಕಾರಿಗಳು ಲೇಔಟ್ ಮಾಲೀಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮುಖಂಡರು, ಕೆರೆ ಅಂಗಳವನ್ನು ಒತ್ತುವರಿ ಮಾಡಿ ಅಕ್ರಮವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಅದೇ ಸ್ಥಳದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆಯ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಗೌರವಾಧ್ಯಕ್ಷ ಪು.ಮಹೇಶ್, ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು, ಖಜಾಂಚಿ ಆನಂದ್ ಕುಮಾರ್, ನಗರ ಅಧ್ಯಕ್ಷ ಶ್ರೀನಗರ ಬಶೀರ್, ನಗರ ಪ್ರಧಾನ ಕಾರ್ಯದರ್ಶಿ ಜೋಗಳ್ಳಿ ಅಮ್ಮು, ಕಾರ್ಯದರ್ಶಿ ಕೆ.ಆರ್.ಮಂಜುನಾಥ ,ಮುಕ್ಕೇನಹಳ್ಳಿ ರವಿ ಸೇರಿದಂತೆ ಹಲವು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.

18ಕೆಡಿಬಿಪಿ3-

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ ಕೆರೆ ಒತ್ತುವರಿ ಹುನ್ನಾರ ಖಂಡಿಸಿ ಕರವೇ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.