ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಬಾಲಶನೇಶ್ವರಸ್ವಾಮಿ ಭಕ್ತ ಮಂಡಳಿ ವತಿಯಿಂದ ನ.23 ರಂದು ಪಟ್ಟಣ್ಣದ ಕೃಷ್ಣನಗರದಲ್ಲಿ ಲಕ್ಷ ದೀಪೋತ್ಸವ, ಕನ್ನಡ ರಾಜ್ಯೋತ್ಸವ, ಕಾವ್ಯಸಂಗಮ ಕವಿಗೋಷ್ಠಿ, ರಸಸಂಜೆ ಹಾಗೂ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಸ್ವಾಮಿಗಳಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ ಎಂದು ಪುರಸಭೆ ಸದಸ್ಯ ಹಾಗೂ ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಎ.ಕೃಷ್ಣ ಅಣ್ಣಯ್ಯ ತಿಳಿಸಿದರು.ಪಟ್ಟಣದಲ್ಲಿ ಸುದ್ದಿಗಾರೊರಂದಿಗೆ ಮಾತನಾಡಿದ ಅವರು, ಅಂದು ಸಂಜೆ 6 ಗಂಟೆಗೆ ಸಿದ್ಧಗಂಗಾ ಮಠದದ ಸಿದ್ದಲಿಂಗ ಸ್ವಾಮೀಜಿ ಮತ್ತು ಬೇಬಿ ಬೆಟ್ಟದ ರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಬಾಲ ಶನೇಶ್ವರ ದೇವಸ್ಥಾನದ ಧರ್ಮದರ್ಶಿ ರವಿತೇಜು ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದರು.
ಕಾರ್ಯಕ್ರಮವನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸಲಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡುವರು ಎಂದರು.ಕೆಪಿಸಿಸಿ ಸದಸ್ಯ ಬಿ.ರೇವಣ್ಣ, ಮೈಸೂರು ನಗರ ಪಾಲಿಕೆ ಸದಸ್ಯೆ ಭಾಗ್ಯ ಸಿ.ಮಾದೇಶ್ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾಯಕಯೋಗಿ ಪೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಗುರುವಂದನಾ ನುಡಿಗಳನ್ನಾಡಿದ್ದಾರೆ ಎಂದರು.
ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಹಾಗೂ ರೈತಸಂಘ ಮುಖಂಡ ಎಚ್.ಎನ್.ವಿಜಯಕುಮಾರ್ ಅವರು ಶ್ರೀ ಶಿವಕುಮಾರ್ ಸವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ ಎಂದರು.ವಿಶೇಷ ಅಹ್ವಾನಿತರಾಗಿ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಸೀಲ್ದಾರ್ ಎಸ್.ಸಂತೋಷ್, ಪೊಲೀಸ್ ಇನ್ಸ್‌ಪೆಕ್ಟರ್ ಎಚ್.ಆರ್.ವಿವೇಕಾನಂದ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಭಾಗವಹಿಸಲಿದ್ದಾರೆ. ಇದಕ್ಕೂ ಮೊದಲು ಮಧ್ಯಾಹ್ನ 2 ಗಂಟೆಗೆ ಕಾವ್ಯ ಸಂಗಮ ಕವಿಗೋಷ್ಠಿ ನಡೆಯಲಿದೆ. ಜಿಲ್ಲಾ ಯುವ ಬರಹಗಾರ ಬಳಗದ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಉದ್ಘಾಟಿಸುವರು. ಕನ್ನಡ ಸಹಾಯಕ ಪ್ರಾದ್ಯಾಪಕ ಹಳ್ಳಿ ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಸಾಹಿತಿ ದ್ಯಾವಪ್ಪ ಅವರು ರಚಿಸಿರುವ ಕ್ರೂರಕಣ್ಣು ಕೃತಿ ಬಿಡುಗಡೆ ಮಾಡಲಾಗುವುದು ಎಂದರು.
ಹೆಮ್ಮೆಯ ಕನ್ನಡಿಗ ಪ್ರಶಸ್ತಿ ಪ್ರದಾನ:ಕಾರ್ಯಕ್ರಮದಲ್ಲಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜು, ರಾಜ್ಯ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹಾಗೂ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅವರಿಗೆ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದರು.
ಸುದ್ಧಿಗೋಷ್ಠಿಯಲ್ಲಿ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್, ಕನಕ ಯುವ ಬಳಗದ ತಾಲೂಕು ಅಧ್ಯಕ್ಷ ಕೆ.ಸ್ವಾಮಿಗೌಡ ಇದ್ದರು.