ಸಾರಾಂಶ
ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರು. ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಹೂಗುಚ್ಛ ನೀಡಿ ಗೌರವಿಸಿದ ಸಚಿವರು ಕನ್ನಡಪ್ರಭ ವಾರ್ತೆ ಮಂಗಳೂರು
ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರು. ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದಿಸಿದರು. ಬೆಂಗಳೂರಿಗೆ ತೆರಳುತಿದ್ದ ಸಚಿವೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರಿಂದ ಘಟನೆಯ ವಿವರ ಪಡೆದು, ಅವರಿಗೆ ಹೂಗುಚ್ಛ ನೀಡಿ, ನಿಮ್ಮ ಕರ್ತವ್ಯದಿಂದ ಹಿರಿಯ ನಾಗರಿಕರಿಗೆ ವಂಚನೆ ಆಗುವುದು ತಪ್ಪಿತು. ಉತ್ತಮ ಕೆಲಸ ಮಾಡಿದ್ದೀರಿ, ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ ಉಪಸ್ಥಿತರಿದ್ದರು.;Resize=(128,128))
;Resize=(128,128))