ಸಾರಾಂಶ
ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಬ್ರಹ್ಮ ರಥೋತ್ಸವ ಪ್ರಯುಕ್ತ ವಿಶೇಷ ಪಲ್ಲಕ್ಕಿ ಪೂಜಾ ಮಹೋತ್ಸವ ನಡೆಯಿತು. ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ದೇವಾಲಯದಲ್ಲಿ ಸೋಮವಾರ ಮುಂಜಾನೆ ಶ್ರೀಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇಧ್ಯ, ತಥಿ ಆರಾಧನೆ ಸೇವೆ, ಸಹಸ್ರನಾಮಾರ್ಚನೆ, ಮಂಗಳಾರತಿ ನೆರವೇರಿಸಿದ ನಂತರ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಉತ್ಸವದ ಅಡ್ಡೆಯಲ್ಲಿ ಪ್ರತಿಷ್ಠಾಪಿಸಿ, ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಬ್ರಹ್ಮ ರಥೋತ್ಸವ ಪ್ರಯುಕ್ತ ವಿಶೇಷ ಪಲ್ಲಕ್ಕಿ ಪೂಜಾ ಮಹೋತ್ಸವ ನಡೆಯಿತು. ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ದೇವಾಲಯದಲ್ಲಿ ಸೋಮವಾರ ಮುಂಜಾನೆ ಶ್ರೀಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇಧ್ಯ, ತಥಿ ಆರಾಧನೆ ಸೇವೆ, ಸಹಸ್ರನಾಮಾರ್ಚನೆ, ಮಂಗಳಾರತಿ ನೆರವೇರಿಸಿದ ನಂತರ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಉತ್ಸವದ ಅಡ್ಡೆಯಲ್ಲಿ ಪ್ರತಿಷ್ಠಾಪಿಸಿ, ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. ನಂತರ ರಥ ಬೀದಿಯಲ್ಲಿ ಪಲ್ಲಕ್ಕಿ ಉತ್ಸವ ನಂತರ ಪ್ರಕಾರೋತ್ಸವ ನೆರವೇರಿಸಿ, ಪೂಜಿಸಲಾಯಿತು. ಶ್ರೀ ಲಕ್ಷ್ಮಿನರಸಿಂಹಸ್ವಾಮಿಯ ಮೂಲ ಮೂರ್ತಿಗೆ ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ತೀರ್ಥ ಪ್ರಸಾಧ ವಿನಿಯೋಗ ಮಾಡಲಾಯಿತು. ಹಿರಿಯ ಅರ್ಚಜಕರಾದ ರಾಮಸ್ವಾಮಿಭಟ್ಟರ ಮಾರ್ಗದರ್ಶನದಲ್ಲಿ ನಾರಾಯಣ ಭಟ್ಟರು, ರಾಮಪ್ರಸಾದ್, ವಿಜಯಕುಮಾರ್, ನಾಗರಾಜು, ಪೂಜಾ ಕೈಂಕರ್ಯ ನೆರವೇರಿಸಿದರು.