ಭೂಸ್ವಾಧೀನ: ವೈಜ್ಞಾನಿಕ ಬೆಲೆಗೆ ರೈತರ ಹಕ್ಕೊತ್ತಾಯ

| Published : Feb 01 2024, 02:02 AM IST

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಆಗಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಹಾಗೂ ಕೋಡಿಹಳ್ಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಬುಧವಾರ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಬಿಡದಿ ಬಳಿಯ ಕ್ಯಾತಗಾನಹಳ್ಳಿ ತೋಟದ ಮನೆಯಲ್ಲಿ ಭೇಟಿ ಮಾಡಿ ಹೋರಾಟ ಬೆಂಬಲಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಪತ್ರ ಸಲ್ಲಿಸಿದರು.

ಬಳಿಕ ಕುಮಾರಸ್ವಾಮಿ, ಈ ವಿಚಾರವಾಗಿ ರಾಜ್ಯದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಿ ರೈತರ ವಿಚಾರವಾಗಿ ಸೂಕ್ತ ನಿರ್ಣಯ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹ ರೈತರ ಸಮಸ್ಯೆಗಳನ್ನು ಚರ್ಚಿಸಿದ ಅವರು, ರೈತರ ಮನವಿಗೆ ಸ್ಪಂದಿಸುವಂತೆ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಜರುಗಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಗಳ ರೈತರು, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹರೀಶ್‌ಗೌಡ ಮತ್ತಿತರರು ಉಪಸ್ಥಿತರಿದ್ದರು.

31ಕೆಡಿಬಿಪಿ1-

ದೊಡ್ಡಬಳ್ಳಾಪುರ ತಾಲೂಕಿನ ರೈತರು ಅವೈಜ್ಞಾನಿಕ ಭೂಸ್ವಾಧೀನದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.