ಸಾರಾಂಶ
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಮಂಜೂರಾದ ಜಾಗವನ್ನು ಹದ್ದು ಬಸ್ತು ಗುರುತಿಸಿ ಕುಶಾಲನಗರ ತಹಸೀಲ್ದಾರ್, ಬುಧವಾರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಮಂಜೂರಾದ ಜಾಗವನ್ನು ಹದ್ದು ಬಸ್ತು ಗುರುತಿಸಿ ಕುಶಾಲನಗರ ತಹಸೀಲ್ದಾರ್, ಬುಧವಾರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರಿಗೆ ಹಸ್ತಾಂತರಿಸಿದರು.ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆ ಹೊಸೂರು ಗ್ರಾಮದ ಸ.ನಂ 1/1ರ 1.70 ಎಕ್ರೆ ಹಾಗೂ ಬೊಳ್ಳೂರು ಗ್ರಾಮದ ಸ.ನಂ 1/2ರ 0.80 ಎಕೆ ಒಟ್ಟು 2.50 ಎಕರೆ ನಿವೇಶನ ಜಾಗವನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಉದ್ದೇಶಕ್ಕಾಗಿ ಕಾರ್ಯ ನಿರ್ವಹಣಾಧಿಕಾರಿ, ತಾಲೂಕು ಪಂಚಾಯಿತಿ, ಸೋಮವಾರಪೇಟೆ ಇವರ ಹೆಸರಿಗೆ ಕಾಯ್ದಿರಿಸಿ ಜಿಲ್ಲಾಧಿಕಾರಿಯವರು ಮಂಜೂರು ಮಾಡಿದ್ದರು.ಜಾಗದ ಹಸ್ತಾಂತರ ಪ್ರಕ್ರಿಯೆಗೆ ಸಾರ್ವಜನಿಕರು ಅಡಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಕ್ರಿಯೆಗೆ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಬುಧವಾರ ಸಾಕಷ್ಟು ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರಳಿ ಸ್ಥಳ ಗುರುತಿಸಿ ಗ್ರಾಮ ಪಂಚಾಯಿತಿ ವಶಕ್ಕೆ ಒಪ್ಪಿಸಲಾಯಿತು.
ಈ ಸಂದರ್ಭ ತಾಲೂಕು ದಂಡಾಧಿಕಾರಿಗಳಾದ ಕಿರಣ್ ಗೌರಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್, ಕಂದಾಯ ನಿರೀಕ್ಷಕ ಸಂತೋಷ್ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸರ್ವ ಸದಸ್ಯರು ಸೇರಿದಂತೆ ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಸರ್ವೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.ಆರಕ್ಷಕ ಇಲಾಖೆಯ ಸಿಬ್ಬಂದಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದರು.