ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿ ಸಭೆ

| Published : Oct 11 2025, 12:03 AM IST

ಸಾರಾಂಶ

ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಮೊದಲ ಸಭೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಧಾಸೌಧದಲ್ಲಿ ಜರುಗಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಗೆ ಸಂಬಂಧಿಸಿದ 2025ನೇ ಸಾಲಿನ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಮೊದಲ ಸಭೆ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದಲ್ಲಿ ಜರುಗಿತು.

ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ವಿಧಾನ ಸಭೆಯ ಸದಸ್ಯರುಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಎಂ.ಟಿ ಕೃಷ್ಣಪ್ಪ, ಅರವಿಂದ ಬೆಲ್ಲದ, ಡಾ. ಶ್ರೀನಿವಾಸ ಎನ್.ಟಿ, ಭೀಮಣ್ಣ ಟಿ. ನಾಯ್ಕ ಭಾಗವಹಿಸಿದ್ದರು. ಕಂದಾಯ ಸಚಿವರು ಈ ತಿದ್ದುಪಡಿ ವಿಧೇಯಕದ ಕುರಿತು ಸಭೆಯಲ್ಲಿ ವಿವರಿಸಿ, ಸಾಧಕ ಬಾಧಕ ಕುರಿತು ಅಧಿಕಾರಿಗಳಿಂದ ವಿವರಣೆ ಪಡೆದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು, ಸಭೆಯಲ್ಲಿ ಕೊಡಗು ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿವರಿಸಿ, ಮಾರ್ಗೋಪಾಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯ ಆಮ್ಲ ಬಿಸ್ವಾಸ್, ಅಪರ ಮುಖ್ಯ ಕಾರ್ಯದರ್ಶಿಗಳು ಕಂದಾಯ ಇಲಾಖೆ (ವರ್ಚುವಲ್ ಮೂಲಕ), ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಅಧಿಕಾರಿಗಳು, ವಿಧಾನ ಸಭೆಯ ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.