ಸಾರಾಂಶ
ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ಮಧ್ಯೆ ಹೆದ್ದಾರಿಗೆ ಕುಸಿದಿರುವ ಗುಡ್ಡದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. ಆದರೂ ಹೆದ್ದಾರಿ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ.
ಉಪ್ಪಿನಂಗಡಿ: ಸತತವಾಗಿ ಸುರಿಯುತ್ತಿರುವ ಧಾರಾಕಾರ ಳೆಗೆ ಶಿರಾಡಿ ಘಾಟ್ ಪ್ರದೇಶದ ಸಕಲೇಶಪುರ ತಾಲೂಕಿನ ಮಾರ್ನಳ್ಳಿ ದೊಡ್ಡತಪ್ಪಲು ಎಂಬಲ್ಲಿ ಅಲ್ಲಲ್ಲಿ ಭೂ ಕುಸಿತವುಂಟಾಗಿದೆ. ರಸ್ತೆಯಲ್ಲಿ ತುಂಬಿದ ಮಣ್ಣಿನ ರಾಶಿಯಿಂದಾಗಿ ವಾಹನಗಳು ಜಖಂಗೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಹೆದ್ದಾರಿ ಅಗಲೀಕರಣ ಕಾಮಗಾರಿಯ ಕಾರಣಕ್ಕೆ ಕತ್ತರಿಸಲ್ಪಟ್ಟ ಗುಡ್ಡಗಳ ಭಾಗದಲ್ಲಿ ಭಾರೀ ಭೂ ಕುಸಿತ ಕಾಣಿಸಿದೆ. ಅಲ್ಲಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಟಿಪ್ಪರೊಂದು ಮಣ್ಣಿನ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಅಡುಗೆ ಅನಿಲ ಸಾಗಾಟದ ಟ್ಯಾಂಕರ್‌ಗಳು, ಕಾರುಗಳು ಮಣ್ಣಿನ ಮಧ್ಯೆ ಸಿಲುಕಿಕೊಂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿವೆ. ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ಮಧ್ಯೆ ಹೆದ್ದಾರಿಗೆ ಕುಸಿದಿರುವ ಗುಡ್ಡದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. ಆದರೂ ಹೆದ್ದಾರಿ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ.