ಮಕ್ಕಳು ಕಲಿತರೆ ಭಾಷೆ ಅಭಿವೃದ್ಧಿ ಸಾಧ್ಯ: ಪುದಿಯಮನೆ ಕೃಷ್ಣ

| Published : Nov 13 2024, 12:09 AM IST

ಮಕ್ಕಳು ಕಲಿತರೆ ಭಾಷೆ ಅಭಿವೃದ್ಧಿ ಸಾಧ್ಯ: ಪುದಿಯಮನೆ ಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಯೋಗದಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಅರೆಭಾಷೆ ಗಡಿನಾಡ ಉತ್ಸವದ ಕ್ರೀಡಾಕೂಟ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲುಮಕ್ಕಳಿಗೆ ಅರೆಭಾಷೆಯನ್ನು ಕಲಿಸಿದರೆ ಮಾತ್ರ ಭಾಷೆಯ ಅಭಿವೃದ್ಧಿ ಸಾಧ್ಯ. ಈ ರೀತಿಯ ಕಾರ್ಯಕ್ರಮಗಳನ್ನು ಇನ್ನಷ್ಟು ಆಯೋಜಿಸಿ ಅರೆಭಾಷೆ ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡಬೇಕು ಎಂದು ನೌಕಾದಳದ ನಿವೃತ್ತ ಸೇನಾನಿ ಪುದಿಯಮನೆ ಕೃಷ್ಣ ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಯೋಗದಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಅರೆಭಾಷೆ ಗಡಿನಾಡ ಉತ್ಸವದ ಕ್ರೀಡಾಕೂಟ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಚೆಯ್ಯಂಡಾಣೆ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇದು ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕಾರ್ಯಕ್ರಮ. ಕೊಡಗಿನಲ್ಲಿ ಪ್ರಥಮ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ನಮ್ಮ ಮಕ್ಕಳಿಗೆ ಮಾತೃಭಾಷೆ, ಸಂಸ್ಕೃತಿ, ಸಂಪ್ರದಾಯಗಳನ್ನು ಕಲಿಸುವುದನ್ನು ಹಿರಿಯರು ಮರೆಯಬಾರದು ಎಂದರು.

ನಿವೃತ್ತ ಶಿಕ್ಷಕಿ ಮಂಞಂಡ್ರ ರೇಖಾ ಉಲ್ಲಾಸ್ ಮಾತನಾಡಿ, ಆಟದಲ್ಲಿ ಸಕಾರಾತ್ಮಕ ಭಾವನೆ ಇರಬೇಕು. ಕ್ರೀಡೆಗೆ ಸಂಬಂಧಿಸಿದಂತೆ ಸೋಲನ್ನು ಯಶಸ್ಸಿನ ಮೆಟ್ಟಿಲು ಎಂದು ಪರಿಗಣಿಸಬೇಕು. ಒಂದು ಭಾಷೆಯನ್ನು ಪ್ರೀತಿಸುವುದರೊಂದಿಗೆ ಇನ್ನೊಂದು ಭಾಷೆಯನ್ನು ಕೂಡ ಬಳಸಬೇಕು ಎಂದು ಹೇಳಿದರು.ಗಡಿನಾಡ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟಕ್ಕೆ ಪ್ರಮುಖರು ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಕಡಂಗ ಗಣಪತಿ ದೇವಸ್ಥಾನದ ಎದುರು ನಿವೃತ್ತ ಸೇನಾನಿ ಪುದಿಯಮನೆ ಕೃಷ್ಣ ಗಾಳಿಯಲ್ಲಿ ಗುಂಡು ಹಾರಿಸಿ, ಸದಾನಂದ ಮಾವಜಿ ಮಾವಜಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಪುರುಷರು ಮತ್ತು ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಓಟದಲ್ಲಿ ಭಾಗವಹಿಸಿದ್ದರು.ಚೆಯ್ಯಂಡಾಣೆ ಸರ್ಕಾರಿ ಪ್ರಾಥಮಿಕ ಶಾಲಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾವಜಿ ದೀಪ ಬೆಳಗಿದರು. ಕಾರ್ಯಕ್ರಮದಲ್ಲಿ ಅಯ್ಯಪ್ಪ ಯುವಕ ಸಂಘ ಅಧ್ಯಕ್ಷ ಹರಿಪ್ರಸಾದ್ ಬೆಳಿಯಂಡ್ರ, ಉತ್ಸವದ ಸಂಚಾಲಕ ವಿನೋದ್ ಮೂಡಗದ್ದೆ, ಚಂದ್ರಾವತಿ ಬಡ್ಡಡ್ಕ, ಅಕಾಡೆಮಿ ಸದಸ್ಯರಾದ ಪಿ.ಎಸ್. ಕಾರ್ಯಪ್ಪ, ಲತಾಪ್ರಸಾದ್ ಕುದ್ಪಾಜೆ, ಅಯ್ಯಪ್ಪ ಯುವಕ ಮಂಡಲದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ವಿವಿಧ ಕ್ರೀಡಾಕೂಟಗಳು ಮತ್ತು ಸ್ಪರ್ಧೆಗಳು ನಡೆದವು. ತೋಟಂ ಬೈಲು ಅನಂತಕುಮಾರ್, ಪೊಕ್ಕಳಂಡ್ರ ಧನೋಜ್, ಮನೋಜ್, ಚಂಡಿರ ರಾಲಿ ಗಣಪತಿ,ವಿ ನೋದ್ ಮೂಡಗದ್ದೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಅಕಾಡೆಮಿ ವತಿಯಿಂದ ಪುಸ್ತಕ ಮಾರಾಟ ನಡೆಯಿತು.