ಸಾರಾಂಶ
ವಿಜಯಪುರ: ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡವು ಸಮೃದ್ಧ ಸಾಹಿತ್ಯ ಪರಂಪರೆ ಮತ್ತು ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿದ ಭಾಷೆಯಾಗಿದ್ದು, ಇಂದಿನ ಸಮಾಜದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಭಾಷೆಯಾಗಿ ಬೆಳೆಯಬೇಕಾಗಿದೆ. ಕನ್ನಡದಲ್ಲಿ ಈ ಕ್ಷೇತ್ರಗಳಿಗೆ ಸಂಬಂಧಿಸಿದ ಜ್ಞಾನವನ್ನು ಸೃಷ್ಟಿಸುವುದು ಮತ್ತು ನವೀನ ಪೀಳಿಗೆಗೆ ಸ್ಥಳೀಯ ಭಾಷೆಯಲ್ಲಿ ಬೋಧನೆ ನೀಡುವುದು ಅತ್ಯಾವಶ್ಯಕವಾಗಿದೆ. ಇದಕ್ಕಾಗಿ ಕನ್ನಡದಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ತತ್ವಜ್ಞಾನ ಸಾಹಿತ್ಯವನ್ನು ರಚನೆ ಮಾಡುವುದರ ಜೊತೆಗೆ ಪಠ್ಯಪುಸ್ತಕಗಳಲ್ಲಿ ಕನ್ನಡ ಬಳಕೆಯನ್ನು ಪ್ರೋತ್ಸಾಹಿಸುವುದು ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದು ಕನ್ನಡದ ಬೆಳವಣಿಗೆಗೆ ಅವಶ್ಯಕವಾಗಿದೆ ಎಂದು ಹೇಳಿದರು.ಈ ವೇಳೆ ಸಾಹಿತಿ ಪ.ಗು.ಸಿದ್ದಾಪುರ, ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ.ಬಳಿಗಾರ, ಪ್ರೊ.ಹನುಮಂತಯ್ಯ ಪೂಜಾರ, ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.