ಭಾಷೆಯೇ ಬದುಕಾಗಬೇಕು: ಎಸಿ ಮಹೇಶ್ಚಂದ್ರ ಕೆ.

| Published : Nov 02 2024, 01:26 AM IST

ಸಾರಾಂಶ

ಕುಂದಾಪುರ ಗಾಂಧಿ ಮೈದಾನದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಕೆ. ಧ್ವಜಾರೋಹಣ ಮಾಡಿ ಸಂದೇಶ ನೀಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಭಾಷೆಗಿಂತ ಬದುಕು ದೊಡ್ಡದು, ಆದರೆ ಭಾಷೆ ಬದುಕಾಗಬೇಕು ಮತ್ತು ನಮಗೆ ಆ ಭಾಷೆಯೇ ಕನ್ನಡವಾಗಬೇಕು ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಕೆ. ಹೇಳಿದರು.ಅವರು ಇಲ್ಲಿನ ಗಾಂಧಿ ಮೈದಾನದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಣೆಯಂಗವಾಗಿ ಧ್ವಜಾರೋಹಣ ಮಾಡಿ ಸಂದೇಶ ನೀಡಿದರು.ಕನ್ನಡ ಭಾಷಾಭಿಮಾನವನ್ನು ಉಸಿರಾಗಿಸಿಕೊಂಡಿರುವ ಉಡುಪಿ ಜಿಲ್ಲೆ ಹಾಗೂ ಕುಂದಾಪುರ ತಾಲೂಕಿನಿಂದ ಕನ್ನಡದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳು ಉಲ್ಲೇಖನೀಯ ಎಂದರು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕನ್ನಡವನ್ನು ಕೇವಲ ಭಾಷೆಯಲ್ಲ, ಅದು ನಮ್ಮೊಳಗೆ ಹಾಸುಹೊಕ್ಕಾಗಿರುವ ಒಂದು ಸಂಸ್ಕೃತಿಯ ಭಾಗ, ಅದನ್ನು ಮುಂದುವರಿಸಬೇಕು ಎಂದರು.ಕುಂದಾಪುರ ಪೊಲೀಸ್ ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ.ಯು., ತಹಸೀಲ್ದಾರ್ ಮಲ್ಲಿಕಾರ್ಜುನ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್, ತಾಲೂಕು ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಉಪ ತಹಸೀಲ್ದಾರ್ ವಿನಯ್, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸದಸ್ಯರಾದ ದೇವಕಿ ಸಣ್ಣಯ್ಯ, ಸಂತೋಷ್ ಕುಮಾರ್ ಶೆಟ್ಟಿ, ಶ್ರೀಧರ ಶೇರುಗಾರ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರಮೇಶ್ ಕುಲಾಲ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ರಾಮಚಂದ್ರ ಮಯ್ಯ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರೂಪಿಸಿದರು. ಪೊಲೀಸ್ ತಂಡದಿಂದ ಕವಾಯತು ನಡೆಯಿತು. ಸಂಚಾರಿ ಠಾಣೆ ಎಸ್‌ಐ ಪ್ರಸಾದ್ ಪಥ ಸಂಚಲನದ ನೇತೃತ್ವ ವಹಿಸಿದ್ದರು.