ಗರ್ಭಕಂಠ ಸಮಸ್ಯೆ: ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆ ಯಶಸ್ವಿ

| Published : Sep 14 2024, 01:46 AM IST

ಗರ್ಭಕಂಠ ಸಮಸ್ಯೆ: ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆ ಯಶಸ್ವಿ
Share this Article
  • FB
  • TW
  • Linkdin
  • Email

ಸಾರಾಂಶ

ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯವೂ ಕಡಿಮೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಸಮಸ್ಯೆಯಿದ್ದ ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಪ್ರಿಯಾಂಕ ಜಯದೇವ, ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಕಿರಣ್ ಕುಮಾರ್ ಹಾಗೂ ಅರೆವಳಿಕೆ ತಜ್ಞ ಡಾ. ಸುಪ್ರಿತ್ ಆರ್. ಶೆಟ್ಟಿ ತಂಡವು ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ಮಹಿಳೆಯರು ಅತಿ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯನ್ನು ಕೀಹೋಲ್ ಸರ್ಜರಿ ಎಂದೂ ಕರೆಯಲಾಗುತ್ತದೆ. ಟೆಲೆಸ್ಕೋಪ್ ಮತ್ತು ಸಣ್ಣ ವೀಡಿಯೋ ಕ್ಯಾಮೆರಾವನ್ನು ಹೊಂದಿರುವ ಸಣ್ಣ ಟ್ಯೂಬ್ ಮೂಲಕ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಅತೀ ಚಿಕ್ಕ ಗಾಯವಾಗುವುದರಿಂದ ರೋಗಿಯು ಬಹಳ ಬೇಗ ಚೇತರಿಸಿಕೊಳ್ಳುತ್ತಾರೆ. ಅಲ್ಲದೆ ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯವೂ ಕಡಿಮೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.